Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನನ್ನ ಜನರಾದರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಾರತಿ ಎತ್ತಿದ್ದುಂಟು. ಸನಾತನ ಸನ್ಮಾರ್ಗಗಳಲ್ಲಿ ಮುಗ್ಗರಿಸಿ ಸರಿಯಲ್ಲದ ಸೀಳುದಾರಿಯಲ್ಲಿ ಅಲೆದದ್ದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಜನರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ ಸರಿಯಲ್ಲದ ಸೀಳುದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನ್ನ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಗರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಗರಿಸುತ್ತಾರೆ. ನನ್ನ ಜನರು ಒಳ್ಳೆಯ ರಾಜಬೀದಿಯ ಮೇಲೆ ನನ್ನನ್ನು ಹಿಂಬಾಲಿಸುವದನ್ನು ತೊರೆದು ಹಾಳಾದ ಹಾದಿಯನ್ನು ಹಿಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವುವಂತೆ ಮಾಡಿ, ಮಾರ್ಗವಲ್ಲದ ಕಾಲು ದಾರಿಗಳಲ್ಲಿ ಅವರನ್ನು ನಡೆಯುವಂತೆ ಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:15
35 ತಿಳಿವುಗಳ ಹೋಲಿಕೆ  

ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.


ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.


ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


“ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ.


“ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.


ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ, ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ.


ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.


ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”


ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.


ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ನುಡಿಯುತ್ತಾನೆ.


ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕು ದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟಿದ್ದೇವೆಂದು ಇಸ್ರಾಯೇಲರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.


ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬುದಾಗಿ ನೀವೂ, ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ಖಂಡಿತವಾಗಿ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!


ಅವರು ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ, ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿ ಕೊಡುವುದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ. ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ, ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.


ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!


ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.


ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು” ಎಂದು ಯೆಹೋವನು ಹೇಳುತ್ತಾನೆ.


ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,


ಲೆಬನೋನಿನ ಹಿಮವು ಅರಣ್ಯದ ಶಿಖರದಿಂದ ತಪ್ಪುವುದೇ? ದೂರದಿಂದ ಇಳಿದು ಹರಿಯುವ ತೊರೆಯ ನೀರು ಬತ್ತುವುದೇ?


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.


ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!


ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.


ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ತನಗೆ ಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.


ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.


ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’


ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.


ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು