Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯವಾಗಿ ಗುರಿಯಾಗುವದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು. ಜನರು ಇಲ್ಲಿಂದ ಹಾದುಹೋಗುವಾಗಲೆಲ್ಲಾ ಸಿಳ್ಳುಹಾಕಿ ತಲೆಯಾಡಿಸುವರು. ದೇಶವು ಹಾಳಾದುದನ್ನು ನೋಡಿ ಬೆರಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. ಅದನ್ನು ಹಾದುಹೋಗುವವರೆಲ್ಲರೂ ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:16
35 ತಿಳಿವುಗಳ ಹೋಲಿಕೆ  

ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,


ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.


ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ,


ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”


ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು; ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.


ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”


ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.


ಯೆಹೋವನು ಅವನನ್ನು ಕುರಿತು ಹೇಳುವುದೇನೆಂದರೆ, ‘ಕನ್ನಿಕೆಯಾಗಿರುವ ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ, ಯೆರೂಸಲೇಮ್ ಕುವರಿಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.


ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಸ್ರಾಯೇಲ್ ದೇಶದ ಯೆರೂಸಲೇಮಿನ ನಿವಾಸಿಗಳ ವಿಷಯವಾಗಿ ಇಂತೆನ್ನುತ್ತಾನೆ, ಅವರು ಅನ್ನವನ್ನು ನಡಗುತ್ತಾ ತಿನ್ನುವರು ಮತ್ತು ನೀರನ್ನು ಹೆದರಿಕೆಯಿಂದ ಕುಡಿಯುವರು; ಏಕೆಂದರೆ ಆ ದೇಶದವರೆಲ್ಲರು ಬಲಾತ್ಕಾರಿಗಳಾಗಿರುವುದರಿಂದ ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ದೇಶವು ಬರಿದಾಗುವುದು.


ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’”


ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.


ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.


ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ; ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ.


ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,


ಆತನು ನಿಮಗೂ, ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು.


ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು. ಅವರು ಯೆಹೋವನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವುದು.


ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡುವೆನು; ಅದರಲ್ಲಿ ವಾಸವಾಗಿರುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.


ನಾನು ಜನರ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ; ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’”


ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು.


ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೋ? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ?


ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.


ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.


ಜನಾಂಗಗಳ ವರ್ತಕರು ನಿನ್ನನ್ನು ನೋಡಿ, ಸಿಳ್ಳು ಹಾಕುತ್ತಾರೆ; ನೀನು ಸಂಪೂರ್ಣ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.”


ಈ ಪ್ರವಾದನೆಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು, “‘ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು, ಹರಟೆಗಾರರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.


ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.


ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.


ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು