Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲು ಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಶತ್ರುಗಳು ಮೇಲೆ ಬಿದ್ದು ದಾಳಿಮಾಡಲು ಬಂದಾಗ ಮೂಡಣ ಬಿರುಗಾಳಿ ಮುಂದೆ ಧೂಳಿ ಮಣ್ಣಿನಂತೆ ನನ್ನ ಜನರನ್ನು ದಿಕ್ಕುಪಾಲಾಗಿ ಚದರಿಸುವೆನು. ಅವರ ಆ ವಿಪತ್ತಿನ ದಿನದಂದು ಅವರತ್ತ ಮುಖತಿರುಗಿಸದೆ ಬೆನ್ನು ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲುಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪೂರ್ವದಿಂದ ಬರುವ ಗಾಳಿಯಂತೆ ಯೆಹೂದದ ಜನರನ್ನು ಅವರ ವೈರಿಗಳ ಎದುರಿನಲ್ಲಿ ಚದರಿಸಿಬಿಡುವೆನು. ನಾನು ಅವರನ್ನು ನಾಶಮಾಡುವೆನು. ಆ ಸಮಯದಲ್ಲಿ ಅವರಿಗೆ ಸಹಾಯಮಾಡಲು ನಾನು ಬರುವದಿಲ್ಲ. ಇಲ್ಲ! ನಾನು ಬಿಟ್ಟುಹೋಗುವುದನ್ನು ಅವರು ನೋಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮೂಡಣ ಗಾಳಿಯಿಂದ ಆದ ಹಾಗೆ, ಅವರನ್ನು ಶತ್ರುವಿನ ಮುಂದೆ ಚದರಿಸುವೆನು. ಅವರ ಆಪತ್ತಿನ ದಿವಸದಲ್ಲಿ ಅವರಿಗೆ ಮುಖವನ್ನಲ್ಲ ಬೆನ್ನನ್ನು ತೋರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:17
16 ತಿಳಿವುಗಳ ಹೋಲಿಕೆ  

ಆದಕಾರಣ ಬಿರುಗಾಳಿಯು ಬಡಿದುಕೊಂಡು ಹೋಗುವ ಒಣ ಹುಲ್ಲನ್ನೋ ಎಂಬಂತೆ ನಾನು ಅವರನ್ನು ಚದರಿಸಿಬಿಡುವೆನು.


ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.


ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.


ಮೂಡಣ ಗಾಳಿಯು ಕೊಚ್ಚಿಕೊಂಡು ಹೋಗುವುದರಿಂದ ಅವನು ಹಾರಿ ಹೋಗುವನು, ಅದು ಅವನನ್ನು ಬಡಿದು ಅವನ ಸ್ಥಳದಿಂದ ದೂರಮಾಡುವುದು.


ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ. ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.


ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ.


ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.


ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.


ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು.


ಹುಟ್ಟುಹಾಕುವವರು ನಿನ್ನನ್ನು ಮಹಾ ತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರದ ಮಧ್ಯದಲ್ಲಿ ಒಡೆದುಬಿಟ್ಟಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು