ಯೆರೆಮೀಯ 18:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |