Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರಾ, ನನ್ನನ್ನು ಕೊಲ್ಲಲು ಅವರು ಮಾಡಿಕೊಂಡಿರುವ ಸಂಚು ನಿಮಗೆ ತಿಳಿದಿದೆ. ಅವರ ಅಪರಾಧವನ್ನು ಕ್ಷಮಿಸಬೇಡಿ, ಅವರ ಪಾಪವನ್ನು ಅಳಿಸಬೇಡಿ, ಅದು ನಿಮ್ಮ ಕಣ್ಣೆದುರಿಗೇ ಇರಲಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪ ವ್ಯಕ್ತವಾಗುವಾಗ ಅವರಿಗೆ ತಕ್ಕುದನ್ನು ಮಾಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ; ಅವರ ಅಪರಾಧವನ್ನು ಕ್ಷವಿುಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನೇ, ನನ್ನನ್ನು ಕೊಲ್ಲಲು ಅವರು ಹಾಕಿದ ಯೋಜನೆಗಳನ್ನೆಲ್ಲ ನೀನು ಬಲ್ಲೆ. ಅವರ ಅಪರಾಧಗಳನ್ನು ಮನ್ನಿಸಬೇಡ. ಅವರ ಪಾಪಗಳನ್ನು ಅಳಿಸಬೇಡ. ನನ್ನ ವೈರಿಗಳನ್ನು ನಾಶಪಡಿಸು, ನೀನು ಕೋಪದಲ್ಲಿದ್ದಾಗ ಆ ಜನರನ್ನು ಶಿಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೂ ಯೆಹೋವ ದೇವರೇ, ಅವರು ನನ್ನನ್ನು ಸಾಯಿಸುವುದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀವು ಬಲ್ಲಿರಿ. ಅವರ ಅಕ್ರಮವನ್ನು ಮನ್ನಿಸಬೇಡಿ. ಅವರ ಪಾಪಗಳನ್ನು ನಿನ್ನ ಸನ್ನಿಧಿಯೊಳಗಿಂದ ಅಳಿಸಿಬಿಡಬೇಡಿರಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪದ ಕಾಲದಲ್ಲಿ ಅವರಿಗೆ ತಕ್ಕದ್ದನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:23
28 ತಿಳಿವುಗಳ ಹೋಲಿಕೆ  

ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.


ಹೀಗಿರಲು ಜನರು ಅಧರ್ಮಿಗಳಾಗಲಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿದ್ದುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ.


ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.


ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.


ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.


ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.


ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು” ಎಂದು ಹೇಳಿದ್ದಾನೆ.


ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.


ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. ಸೆಲಾ


ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.


ಆದಕಾರಣ ಇಗೋ, ನಾನು ಈ ಜನರ ಮುಂದೆ ಅಡ್ಡಿಆತಂಕಗಳನ್ನು ಒಡ್ಡುವೆನು. ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು” ಎಂದು ನುಡಿಯುತ್ತಾನೆ.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”


ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.


ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!


ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.


ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.


ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.


ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.


ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ. ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು.


ನನ್ನ ವೈರಿಗಳು ನನ್ನ ಮೇಲೆ ತೀರಿಸಿದ ಹಗೆಯನ್ನೂ ಮತ್ತು ಕಲ್ಪಿಸಿಕೊಂಡ ಯುಕ್ತಿಗಳನ್ನೂ ನೋಡಿದ್ದೀಯಲ್ಲಾ.


ಯೆಹೋವನೇ, ಅವರು ನನಗೆ ವಿರುದ್ಧವಾಗಿ ಮಾಡಿದ ದೂಷಣೆಯೂ, ನನ್ನ ಹಾನಿಗಾಗಿ ಕಲ್ಪಿಸಿದ ಕುಯುಕ್ತಿಗಳೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು