Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಕುಂಬಾರನು ಜೇಡಿಮಣ್ಣಿನಿಂದ ಮಾಡುತ್ತಿದ್ದ ಪಾತ್ರೆಯು ಅವನ ಕೈಯಲ್ಲಿ ಕೆಟ್ಟುಹೋಗಲು ಅವನು ಪುನಃ ತನಗೆ ಸರಿತೋಚಿದ ಹಾಗೆ ಅದನ್ನು ಹೊಸ ಪಾತ್ರೆಯನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನು ಜೇಡಿ ಮಣ್ಣಿನಿಂದ ಮಾಡುತ್ತಿದ್ದ ಒಂದು ಪಾತ್ರೆ ಕೆಟ್ಟುಹೋಗುತ್ತಿದ್ದಾಗಲೆಲ್ಲ ಅದನ್ನು ಮತ್ತೆ ತನಗೆ ಸರಿತೋಚಿದ ಹಾಗೆ ಹೊಸ ಪಾತ್ರೆಯನ್ನಾಗಿ ಮಾಡುತ್ತಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಕುಂಬಾರನು ಜೇಡಿಮಣ್ಣಿನಿಂದ ಮಾಡುತ್ತಿದ್ದ ಪಾತ್ರೆಯು ಅವನ ಕೈಯಲ್ಲಿ ಕೆಟ್ಟು ಹೋಗಲು ಪುನಃ ತನಗೆ ಸರಿತೋಚಿದ ಹಾಗೆ ಅದನ್ನು ಹೊಸಪಾತ್ರೆಯನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವನು ಜೇಡಿಮಣ್ಣಿನಿಂದ ಒಂದು ಮಡಕೆಯನ್ನು ಮಾಡುತ್ತಿದ್ದನು. ಆ ಮಡಕೆಯಲ್ಲಿ ಯಾವುದೋ ಒಂದು ದೋಷವಿತ್ತು. ಆದ್ದರಿಂದ ಆ ಕುಂಬಾರನು ಪುನಃ ಆ ಜೇಡಿಮಣ್ಣನ್ನು ಬಳಸಿ ಮತ್ತೊಂದು ಮಡಕೆಯನ್ನು ಮಾಡಿದನು. ಮಡಕೆಗೆ ತಾನು ಬಯಸಿದ ಆಕಾರವನ್ನು ಕೊಡಲು ತನ್ನ ಕೈಗಳನ್ನು ಉಪಯೋಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟು ಹೋಯಿತು. ಆಗ ಕುಂಬಾರನಿಗೆ ಒಳ್ಳೆಯದೆಂದು ತೋರುವ ಪ್ರಕಾರ, ಅದನ್ನು ಮತ್ತೊಂದು ಪಾತ್ರೆಯನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:4
5 ತಿಳಿವುಗಳ ಹೋಲಿಕೆ  

“ಯೆಹೋವನು ಹೀಗೆನ್ನುತ್ತಾನೆ, ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಬಾರದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ, ನೀವು ನನ್ನ ಕೈಯಲ್ಲಿದ್ದೀರಿ.


ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?


ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು; ಇಗೋ, ಅವನು ಚಕ್ರದ ಮೇಲೆ ತನ್ನ ಕೆಲಸವನ್ನು ನಡೆಸುತ್ತಿದ್ದನು.


ಆಗ ಯೆಹೋವನು ನನಗೆ ಈ ಮಾತನ್ನು ಅನುಗ್ರಹಿಸಿದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು