ಯೆರೆಮೀಯ 18:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದಂಡನೆಗೆ ನಿರ್ಣಯಿಸಲಾದ ಆ ಜನಾಂಗದವರು ತಮ್ಮ ಕೆಟ್ಟತನವನ್ನು ಬಿಟ್ಟು ಹಿಂತಿರುಗಿದ್ದೇ ಆದರೆ ನಾನು ಬರಮಾಡಬೇಕೆಂದಿದ್ದ ಆ ವಿಪತ್ತನ್ನು ನಾನು ಮನಮರುಗಿ ಬರಮಾಡದಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ದಂಡನೆ ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಆ ಜನಾಂಗದ ಜನರು ತಮ್ಮ ಮನಸ್ಸನ್ನು ಮತ್ತು ಜೀವನವನ್ನು ಪರಿವರ್ತಿಸಿಕೊಳ್ಳಬಹುದು. ಆ ಜನಾಂಗದ ಜನರು ಮಾಡುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಆಗ ನಾನು ನನ್ನ ವಿಚಾರವನ್ನು ಬದಲಾಯಿಸಿ, ಆ ಜನಾಂಗವನ್ನು ನಾಶಪಡಿಸಬೇಕೆಂದು ಮಾಡಿದ ನನ್ನ ಮುಂಚಿನ ಯೋಜನೆಗಳನ್ನು ಕಾರ್ಯರೂಪಕ್ಕೆ ತರದಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು ಆ ಜನಾಂಗಕ್ಕೆ ವಿರೋಧವಾಗಿ ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ, ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು. ಅಧ್ಯಾಯವನ್ನು ನೋಡಿ |
ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.
ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.