Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ನೀನು ನಿನ್ನ ಸಂಗಡ ಬಂದವರ ಕಣ್ಣೆದುರಿಗೆ ಆ ಮಡಿಕೆಯನ್ನು ಒಡೆದುಬಿಟ್ಟು ಅವರಿಗೆ ಹೀಗೆ ಹೇಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಆಗ ನೀನು, ನಿನ್ನ ಸಂಗಡ ಬಂದವರ ಕಣ್ಣೆದುರಿಗೇ ಆ ಮಣ್ಣಿನ ಮಡಕೆಯನ್ನು ಒಡೆದುಬಿಟ್ಟು ಅವರಿಗೆ ಹೀಗೆಂದು ನುಡಿ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ನೀನು ನಿನ್ನ ಸಂಗಡ ಬಂದವರ ಕಣ್ಣೆದುರಿಗೆ ಆ ಕೂಜವನ್ನು ಒಡೆದುಬಿಟ್ಟು ಅವರಿಗೆ ಹೀಗೆ ಹೇಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಯೆರೆಮೀಯನೇ, ನೀನು ಜನರಿಗೆ ಆ ವಿಷಯಗಳನ್ನು ಹೇಳು. ಅವರು ಗಮನವಿಟ್ಟು ಕೇಳುತ್ತಿರುವಾಗ ಆ ಮಣ್ಣಿನ ಕೊಡವನ್ನು ಒಡೆದುಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಆಗ ನೀನು, ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಮಡಕೆಯನ್ನು ಒಡೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:10
6 ತಿಳಿವುಗಳ ಹೋಲಿಕೆ  

ಯೆಹೋವನು ನನಗೆ ಹೀಗೆ ಹೇಳಿದನು, “ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ.


ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು, ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು” ಎಂಬುದೇ.


ಬಹು ಬೆಲೆಯುಳ್ಳ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆ ತೈಲವನ್ನು ಆತನ ತಲೆಯ ಮೇಲೆ ಸುರಿದಳು.


ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು.


ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ; “ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು