ಯೆರೆಮೀಯ 19:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಜೆರುಸಲೇಮಿನ ಮನೆಗಳೂ ಜುದೇಯದ ಅರಸರ ಮನೆಗಳೂ, ಅಂದರೆ ಯಾವ ಯಾವ ಮನೆಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಾರತಿ ಎತ್ತಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲ ಹೊಲಸಾಗಿ ತೋಫೆತ್ ಸ್ಥಳಕ್ಕೆ ಸಮಾನವಾಗುವುವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆರೂಸಲೇವಿುನ ಮನೆಗಳೂ ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲಾ ಹೊಲಸಾಗಿ ತೋಫೆತೆಂಬ ಸ್ಥಳಕ್ಕೆ ಸಮಾನವಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ‘ಜೆರುಸಲೇಮಿನ ಮನೆಗಳು ಈ ತೋಫೆತಿನಷ್ಟೆ “ಹೊಲಸಾಗುವವು.” ಯೆಹೂದದ ರಾಜರ ಅರಮನೆಗಳು ಈ ತೋಫೆತಿನಂತೆ ಹಾಳಾಗುವವು. ಏಕೆಂದರೆ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರುಗಳನ್ನು ಪೂಜಿಸಿದರು. ಅವರು ನಕ್ಷತ್ರಗಳನ್ನು ಪೂಜಿಸಿ ಅವುಗಳ ಗೌರವಾರ್ಥವಾಗಿ ಧೂಪಹಾಕಿದರು. ಅವರು ಸುಳ್ಳುದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದರು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪ ಸುಟ್ಟು, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ, ಆ ಎಲ್ಲಾ ಮನೆಗಳ ನಿಮಿತ್ತವಾಗಿ ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವುವು, ಎಂಬುದೇ.’ ” ಅಧ್ಯಾಯವನ್ನು ನೋಡಿ |