Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ಬೋಕಿಯ ಬಾಗಿಲಿನ ಸಮೀಪದಲ್ಲಿರುವ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ತಿಳಿಸುವ ಮಾತುಗಳನ್ನು ಸಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬೋಕಿಯ ಬಾಗಿಲಿನ ಸಮೀಪದಲ್ಲಿರುವ ‘ಬೆನ್‍ಹಿನ್ನೋಮ್’ ಕಣಿವೆಗೆ ಹೋಗು. ನಾನು ನಿನಗೆ ತಿಳಿಸುವ ಈ ಸಂದೇಶವನ್ನು ಅಲ್ಲಿ ಸಾರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬೋಕಿಯ ಬಾಗಿಲಿನ ಸಮೀಪದಲ್ಲಿರುವ ಬೆನ್‍ಹಿನ್ನೋಮ್ ತಗ್ಗಿಗೆ ಹೋಗಿ ನಾನು ನಿನಗೆ ತಿಳಿಸುವ ಮಾತುಗಳನ್ನು ಸಾರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬೋಕಿಯ ದ್ವಾರದ ಸಮೀಪದಲ್ಲಿರುವ ಬೆನ್‌ಹಿನ್ನೊಮ್ ತಗ್ಗಿಗೆ ಹೋಗು. ನಿನ್ನ ಸಂಗಡ ಜನರ ಹಿರಿಯರಲ್ಲಿ ಕೆಲವರನ್ನೂ ಯಾಜಕರ ಹಿರಿಯರಲ್ಲಿ ಕೆಲವರನ್ನೂ ಕರೆದುಕೊಂಡು ಹೋಗು. ನಾನು ನಿನಗೆ ಹೇಳುವುದನ್ನು ನೀನು ಅಲ್ಲಿ ಅವರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮುರಿದ ಪಾತ್ರೆಗಳ ಪ್ರವೇಶದ್ವಾರದ ಮೂಲಕ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:2
19 ತಿಳಿವುಗಳ ಹೋಲಿಕೆ  

ಬೆನ್ ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲಿರುವ ರೆಫಾಯೀಮ್ ಕಣಿವೆಯ ಉತ್ತರದಲ್ಲಿರುವ ಬೆಟ್ಟದ ತುದಿಗೆ ಹೋಗುತ್ತದೆ.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೆನ್ ಹಿನ್ನೋಮ್ ತಗ್ಗಿನಲ್ಲಿದ್ದ “ತೋಫೆತ್” ಎಂಬ ಯಜ್ಞವೇದಿಯ ಸ್ಥಳವನ್ನು ಹೊಲೆಮಾಡಿದನು.


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.


ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಅವನು ಬೆನ್ ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಅಗ್ನಿಪ್ರವೇಶ ಮಾಡಿಸಿದನು.


ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


“ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.


ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.


ಅದೇನೆಂದರೆ “ನೀನು ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಆಜ್ಞಾಪಿಸುವ ಸಂದೇಶವನ್ನು ಸಾರು” ಎಂದು ಹೇಳಿದನು.


“ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.


ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.


“ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.


ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.


ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.


ಇವರ ನಂತರ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.


“ನೀನೆದ್ದು ಕುಂಬಾರನ ಮನೆಗೆ ಇಳಿದುಹೋಗು; ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುವೆನು” ಎಂಬ ಮಾತನ್ನು ದಯಪಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು