ಯೆರೆಮೀಯ 19:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ‘ಜುದೇಯದ ಅರಸರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನ ಸಂದೇಶವನ್ನು ಕೇಳಿರಿ. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ: ಈ ಸ್ಥಳದ ಮೇಲೆ ನಾನು ಕೇಡನ್ನು ಬರಮಾಡುವೆನು. ಅದರ ಸುದ್ದಿಯನ್ನು ಕೇಳುವವರ ಕಿವಿಗಳೂ ನಿಮಿರುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೂದದ ಅರಸರೇ, ಯೆರೂಸಲೇವಿುನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಮೊರ್ರೆನ್ನುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿನ್ನ ಜೊತೆಯಲ್ಲಿದ್ದ ಜನರಿಗೆ ಹೇಳು, ‘ಯೆಹೂದದ ರಾಜನೇ, ಜೆರುಸಲೇಮಿನ ಜನರೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಇಸ್ರೇಲರ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆ ಹೇಳುತ್ತಾನೆ: ನಾನು ಈ ಸ್ಥಳಕ್ಕೆ ಒಂದು ಭಯಂಕರವಾದ ಕೇಡನ್ನು ಉಂಟುಮಾಡುವೆನು. ಅದರ ಬಗ್ಗೆ ಕೇಳಿದ ಪ್ರತಿಯೊಬ್ಬ ವ್ಯಕ್ತಿಯು ವಿಸ್ಮಯಪಡುವನು ಮತ್ತು ಭಯಪಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ‘ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ. ಅದನ್ನು ಕೇಳುವವರೆಲ್ಲರ ಕಿವಿಗೆ ಜುಮ್ಮೆನ್ನುವುದು. ಅಧ್ಯಾಯವನ್ನು ನೋಡಿ |