ಯೆರೆಮೀಯ 19:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ, ಸಂಕಟಕ್ಕೆ ಗುರಿಮಾಡುವಾಗ, ಅವರು ತಮ್ಮ ಇಷ್ಟ ಮಿತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರ ಶತ್ರುಗಳು, ಕೊಲೆಗಡುಕರು ಅವರನ್ನು ಮುತ್ತಿ ನಸುಕುವಾಗ ಒಬ್ಬರು ಮತ್ತೊಬ್ಬರನ್ನು ತಿನ್ನುವುದು ಮಾತ್ರವಲ್ಲ, ತಮ್ಮ ಪುತ್ರಪುತ್ರಿಯರ ಮಾಂಸವನ್ನೇ ತಿನ್ನುವರು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ ಬಹಳವಾಗಿ ಇರಕಿಸುವಾಗ ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ಇಷ್ಟ ವಿುತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಶತ್ರುವು ನಗರದ ಸುತ್ತಲೂ ತನ್ನ ಸೈನ್ಯವನ್ನು ತರುವನು. ಜನರು ಆಹಾರವನ್ನು ಶೇಖರಿಸಲು ಹೊರಗೆ ಹೋಗದಂತೆ ಆ ಸೈನ್ಯವು ತಡೆಯುವದು. ನಗರದಲ್ಲಿದ್ದ ಜನರು ಉಪವಾಸ ಬೀಳುವರು. ಅವರು ಹಸಿವು ತಾಳಲಾರದೆ ತಮ್ಮ ಮಕ್ಕಳನ್ನೇ ತಿನ್ನುವರು. ಆಮೇಲೆ ಅವರು ಒಬ್ಬರನ್ನೊಬ್ಬರು ತಿನ್ನಲು ಪ್ರಾರಂಭಿಸುವರು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರು ತಮ್ಮ ಪುತ್ರಪುತ್ರಿಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಮುತ್ತಿಗೆಯಲ್ಲಿಯೂ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.’ ಅಧ್ಯಾಯವನ್ನು ನೋಡಿ |