Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟಿದ್ದಾರೆ, ತಮಗೋಸ್ಕರ ತೊಟ್ಟಿಗಳನ್ನು, ನೀರು ನಿಲ್ಲದ ಬಿರಿದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:13
49 ತಿಳಿವುಗಳ ಹೋಲಿಕೆ  

ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.


ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.


ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.


ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.


ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.


ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.


ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.


ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.


ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.


“ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.


ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.


ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.


ಪ್ರಸಂಗಿಯು ಹೀಗೆ ಹೇಳುತ್ತಾನೆ. “ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.


ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.


ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ.


ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ.


ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.


“ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು? ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿಹೇಳು.


ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ. ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿ ಬರುವವರ ಮೇಲಂಗಿಯನ್ನು ಕಿತ್ತುಕೊಳ್ಳುತ್ತೀರಿ.


ಲೆಬನೋನಿನ ಹಿಮವು ಅರಣ್ಯದ ಶಿಖರದಿಂದ ತಪ್ಪುವುದೇ? ದೂರದಿಂದ ಇಳಿದು ಹರಿಯುವ ತೊರೆಯ ನೀರು ಬತ್ತುವುದೇ?


ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ; ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ.


“ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ.


ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.


ಆ ಸ್ತ್ರೀ ಆತನಿಗೆ, “ಅಯ್ಯಾ, ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಆಳವಾಗಿದೆ, ಹೀಗಿರುವಾಗ, ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು?


ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.


ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.


“‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.


ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.


ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.


ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.


ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು