Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನಗೆ ಮಾರ್ಗದರ್ಶಿಯಾಗಿದ್ದ, ನಿನಗೆ ದೇವರಾಗಿದ್ದ ಸರ್ವೇಶ್ವರನಾದ ನನ್ನನ್ನೇ ತೊರೆದುಬಿಟ್ಟು ಇದನ್ನೆಲ್ಲ ನೀನೇ ನಿನ್ನ ಮೇಲೆ ಬರಮಾಡಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನನ್ನು ದಾರಿಯಲ್ಲಿ ನಡಿಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ತೊಂದರೆಯು ನಿನ್ನ ತಪ್ಪಿನ ಫಲ. ನಿನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನಿಗೆ ನೀನು ವಿಮುಖನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:17
28 ತಿಳಿವುಗಳ ಹೋಲಿಕೆ  

ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು?


ಜನವಿರುವ ಊರನ್ನು ಸೇರುವಂತೆ, ಅವರನ್ನು ಸರಿಯಾದ ದಾರಿಯಲ್ಲಿ ನಡೆಸಿದನು.


ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.


ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.


ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರೆತಂದನು, ಆತನ ಪ್ರೀತಿಯು ಶಾಶ್ವತವಾದದ್ದು.


ನಾನು ನೋಡಿರುವ ಮಟ್ಟಿಗೆ ಅಧರ್ಮವನ್ನು ಉತ್ತು, ಕೇಡನ್ನು ಬಿತ್ತುವವರು ಕೇಡನ್ನೇ ಕೊಯ್ಯುವರು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು; ತನ್ನ ಕುಮಾರ ಕುಮಾರ್ತೆಯರ ವಿಷಯದಲ್ಲಿ ವ್ಯಥೆಪಟ್ಟನು.


ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು. ಪ್ರೀತಿಯಿಂದ ಪರಾಂಬರಿಸಿ ಕಣ್ಣುಗುಡ್ಡೆಯಂತೆ ಕಾಪಾಡಿದನು.


“ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.


ನಿಮ್ಮ ಅಪರಾಧಗಳು ನಿಮಗಾಗುವ ಪ್ರಯೋಜನಗಳನ್ನು ತಪ್ಪಿಸಿಬಿಟ್ಟಿವೆ, ನಿಮ್ಮ ಪಾಪಗಳು ನಿಮ್ಮ ಒಳಿತನ್ನು ತಡೆದಿದೆ.


“ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.


“‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.


ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.


ಅವರ ಪಾಪಕ್ಕೂ, ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ನನ್ನ ಮುಖವನ್ನು ಅವರಿಗೆ ಮರೆಮಾಡಿದ್ದೇನೆ.”


ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


ಅವರು ಆತನನ್ನು ಹಿಂಬಾಲಿಸದೆ, ತಿರುಗಿಕೊಂಡು ಆತನ ಮಾರ್ಗಗಳನ್ನೆಲ್ಲಾ ಅಲಕ್ಷ್ಯಮಾಡಿದ್ದರಷ್ಟೆ.


ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.


ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.


ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? ಯೆರೂಸಲೇಮಲ್ಲವೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು