ಯೆರೆಮೀಯ 2:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೈದ್ ನದಿಯ ನೀರನ್ನು ಕುಡಿಯಲು ಈಜಿಪ್ಟಿನ ದಾರಿಯನ್ನು ಹಿಡಿದದ್ದರಿಂದ ನಿನಗೆ ಬಂದ ಲಾಭವಾದರೂ ಏನು? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡಲು ಅಸ್ಸೀರಿಯ ಮಾರ್ಗದಲ್ಲಿ ಹೆಜ್ಜೆಯಿಟ್ಟಿದ್ದರಿಂದ ನಿನಗೆ ಬಂದ ಲಾಭವಾದರೂ ಏನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್‍ನದಿಯ ನೀರನ್ನು ಕುಡಿಯಬೇಕಾದದ್ದೇನು? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? [ಯೂಫ್ರೇಟೀಸ್] ನದಿಯ ಜಲವನ್ನು ಪಾನಮಾಡಬೇಕಾದದ್ದೇನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೂದದ ಜನರೇ, ಅದರ ಬಗ್ಗೆ ಯೋಚಿಸಿರಿ. ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನ್ನು ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ? ಅವರ ನದಿಯ ನೀರನ್ನು ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಈಗ ಶೀಹೋರಿನ ನೀರು ಕುಡಿಯುವುದಕ್ಕಾಗಿ ಈಜಿಪ್ಟಿನ ದಾರಿಯಲ್ಲಿ ನಿನಗೇನು ಕೆಲಸ? ಯೂಫ್ರೇಟೀಸ್ ನದಿಯ ನೀರು ಕುಡಿಯುವುದಕ್ಕಾಗಿ ಅಸ್ಸೀರಿಯದ ದಾರಿಯಲ್ಲಿ ನಿನಗೇನು ಕೆಲಸ? ಅಧ್ಯಾಯವನ್ನು ನೋಡಿ |