Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟದ್ದು ಕೆಟ್ಟದ್ದಾಗಿಯೂ ವಿಷವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು ಎಂಬದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:19
40 ತಿಳಿವುಗಳ ಹೋಲಿಕೆ  

ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.


ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.


ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.


ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇಸ್ರಾಯೇಲೂ ಮತ್ತು ಎಫ್ರಾಯೀಮೂ ತಮ್ಮ ದುರ್ಮಾರ್ಗದಲ್ಲಿ ಎಡವಿ ಬೀಳುವವು; ಯೆಹೂದವೂ ಅವುಗಳೊಂದಿಗೆ ಬೀಳುವುದು.


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.


ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.


ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ.


“ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.


ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.


ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.


ಇಸ್ರಾಯೇಲು ಮೊಂಡ ಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲ ಸ್ಥಳದಲ್ಲಿ ಮೇಯಿಸುವನೋ?


ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


“ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.


ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


“ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.


ಅವರ ಪಾಪಕ್ಕೂ, ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ನನ್ನ ಮುಖವನ್ನು ಅವರಿಗೆ ಮರೆಮಾಡಿದ್ದೇನೆ.”


ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.


ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು?


ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? ಯೆರೂಸಲೇಮಲ್ಲವೇ!


ಅದರಂತೆಯೇ ಇಸ್ರಾಯೇಲ್ಯರು ಹೋರೇಬ್ ಬೆಟ್ಟದಿಂದ ಮುಂದೆ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.


ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.


ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.


ಆಗ ಪ್ರವಾದಿಯಾದ‍ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, “ಯೆಹೋವನು ಹೀಗೆನ್ನುತ್ತಾನೆ, ‘ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ’” ಎಂದು ಹೇಳಿದನು.


ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು.


ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.


ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.


ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ” ಎಂದು ಯೆಹೋವನು ನುಡಿಯುತ್ತಾನೆ.


“ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.


“ಈ ವಿಪತ್ತುಗಳು ನಿನಗೆ ಸಂಭವಿಸುವುದಕ್ಕೆ, ನೀನು ಜನಾಂಗಗಳನ್ನು ಮೋಹಿಸಿ, ಅವರ ವಿಗ್ರಹಗಳಿಂದ ನಿನ್ನನ್ನು ಅಪವಿತ್ರ ಮಾಡಿಕೊಂಡದ್ದೇ ಕಾರಣ.


ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ. ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದ್ದಿ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು