Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತು ನಾನು ಸೇವೆ ಮಾಡುವದಿಲ್ಲವೆಂದು ಅಂದುಕೊಳ್ಳುತ್ತಿದ್ದೀ; ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಸೂಳೆಯಾಗಿ ನಡೆದಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೂ ನೀನು ವೇಶ್ಯೆಯಾಗಿ ನಡೆದಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:20
50 ತಿಳಿವುಗಳ ಹೋಲಿಕೆ  

ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು.


ನೀವು ಐಗುಪ್ತ್ಯರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನು.


ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನು ಎತ್ತರವಾದ ಗುಡ್ಡಗಳನ್ನು ಕಂಡಾಗೆಲ್ಲಾ, ಅವರ ಯಜ್ಞವೇದಿಗಳನ್ನು ಮತ್ತು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು.


ನಾನು ಅವಳಿಗೆ, “ನನಗಾಗಿ ಬಹು ದಿನಗಳು ತಾಳಿಕೊಂಡಿರು; ವ್ಯಭಿಚಾರ ಮಾಡಬೇಡ, ಯಾರೊಂದಿಗೂ ವ್ಯಭಿಚಾರಮಾಡಬೇಡ. ನಾನು ಸಹ ನಿನ್ನವನೇ, ನಿನ್ನ ಸಂಗಡ ವಾಸಿಸುವೆನು” ಎಂದು ಹೇಳಿದೆನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು.


ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.


ಅವನು ಹೇರಿದ ನೊಗವನ್ನು ಈಗ ನಿನ್ನ ಮೇಲಿನಿಂದ ಮುರಿದು ಕಟ್ಟಿದ್ದ ಕಣ್ಣಿಗಳನ್ನು ಕಿತ್ತುಹಾಕುವೆನು.”


ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”


“ಒಹೊಲಳು ನನ್ನ ವಶವಾಗಿರುವಾಗಲೇ, ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯರನ್ನು,


ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’


ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಹಣಕೊಡದಿರುವಿ.


ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ, ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ವ್ಯಭಿಚಾರಿಯಂತೆ ನೀನು ನಡೆಯುವವಳಲ್ಲ.


ಮತ್ತು ಇಷ್ಟೂ ಸಾಲದೆಂದು ಅಶ್ಶೂರ್ಯರೊಂದಿಗೂ ವ್ಯಭಿಚಾರಮಾಡಿದಿ; ಹೌದು, ಅವರೊಡನೆ ವ್ಯಭಿಚಾರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.


ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು. ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು.


ಆ ದಿನದಲ್ಲಿ, ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು, ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.


ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.


ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು.


ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.


ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು.


ಇದಲ್ಲದೆ, ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲಿ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ,


ಅದಕ್ಕೆ ಜನರು, “ನಮ್ಮ ದೇವರಾದ ಯೆಹೋವನನ್ನೇ ಸೇವಿಸುತ್ತೇವೆ. ಆತನ ಮಾತನ್ನೇ ಕೇಳುತ್ತೇವೆ” ಎಂದರು.


ಆಗ ಅವರು ಯೆಹೋಶುವನಿಗೆ ಉತ್ತರವಾಗಿ “ನೀನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ; ಎಲ್ಲಿಗೆ ಕಳುಹಿಸಿದರೂ ಹೋಗುತ್ತೇವೆ.


ನಮಗೆ ಯೆಹೋವನೇ ದೇವರಾಗಿರುವನೆಂದೂ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿಯಮಗಳನ್ನು ಕೈಕೊಂಡು, ಆತನ ಮಾತಿಗೆ ಲಕ್ಷ್ಯವಿಡುವೆವು ಎಂದು ನೀವು ಈಗ ಒಡಂಬಟ್ಟಿದ್ದೀರಿ.


ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.


ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು” ಎಂದು ಹೇಳಿದಿರಿ.


ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.


ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.


ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.


ಜನರೆಲ್ಲರೂ ಒಗ್ಗಟ್ಟಾಗಿ, “ಯೆಹೋವನು ಹೇಳಿದಂತೆಯೇ ಮಾಡುವೆವು” ಎಂದು ಉತ್ತರಕೊಟ್ಟರು. ಮೋಶೆ ಯೆಹೋವನ ಬಳಿಗೆ ಹಿಂತಿರುಗಿ ಹೋಗಿ ಅವರು ಹೇಳಿದ ಮಾತುಗಳನ್ನು ಆತನಿಗೆ ಹೇಳಿದನು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.


ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.


ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?


ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.


ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?


ಪರ್ವತಾಗ್ರಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವುದರಿಂದ ಅವುಗಳ ಕೆಳಗೆ ಇವುಗಳನ್ನು ನಡೆಸುತ್ತಾರೆ. ಹೀಗಿರಲು ನನ್ನ ಜನರೇ, ನಿಮ್ಮ ಕುಮಾರಿಯರು ವ್ಯಭಿಚಾರಿಗಳಾಗಿ ನಡೆಯುವುದೂ, ನಿಮ್ಮ ವಧುಗಳು ವ್ಯಭಿಚಾರ ಮಾಡುವುದೂ ಏನಾಶ್ಚರ್ಯ?


ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.


ಅವರು ಯೆಹೋವನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದರು.


ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.


“ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ.


ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.


ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ. ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದ್ದಿ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು