ಯೆರೆಮೀಯ 2:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ” ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನೀನು ಎಷ್ಟೇ ಚೌಳಿನಿಂದ ತೊಳೆದುಕೊಂಡರೂ ಎಷ್ಟೇ ಸಬ್ಬುಸೀಗೆಯಿಂದ ಉಜ್ಜಿಕೊಂಡರೂ ನಿನ್ನ ಅಕ್ರಮ ನನ್ನೆದುರಿಗೆ ಕಣ್ಣುಕಿಚ್ಚಾಗಿ ನಿಂತಿದೆ. ಇದು ಸರ್ವೇಶ್ವರ ಸ್ವಾಮಿಯಾದ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನೀನು ಬಹಳ ಚೌಳನ್ನು ಹಾಕಿಕೊಂಡು ಸಬ್ಬಿನಿಂದ ತೊಳಕೊಂಡರೂ ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕರೆಯಾಗಿ ನಿಂತಿದೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನೀನು ಚೌಳನಿಂದ ತೊಳೆದುಕೊಂಡರೂ ಹೆಚ್ಚು ಸೋಪನ್ನು ಉಪಯೋಗಿಸಿದರೂ ನಾನು ನಿನ್ನ ದೋಷವನ್ನು ಕಂಡುಹಿಡಿಯಬಲ್ಲೆ” ಅನ್ನುತ್ತಾನೆ ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೀನು ಸಾಬೂನಿನಿಂದ ತೊಳೆದುಕೊಂಡರೂ, ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |