ಯೆರೆಮೀಯ 2:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸರ್ವೇಶ್ವರ ಹೀಗೆನ್ನುತ್ತಾರೆ : “ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುತ್ತಾನೋ ಹಾಗೆಯೆ, ಎಲೈ ಇಸ್ರಯೇಲ್ ಜನರೇ, ನೀವು ನಾಚಿಕೆಪಡುವಿರಿ. ಮರಕ್ಕೆ, ‘ನೀನು, ನನ್ನ ತಂದೆ’ ಎಂತಲೂ ಕಲ್ಲಿಗೆ, ‘ನೀನು ಹೆತ್ತ ತಾಯಿ’ ಎಂತಲೂ ಹೇಳುತ್ತೀರಿ. ನಿಮ್ಮ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಎಲ್ಲರು ಮಾನಭಂಗಕ್ಕೆ ಈಡಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವದು; ಮರಕ್ಕೆ, ನೀನು ನನ್ನ ತಂದೆ ಎಂತಲೂ ಕಲ್ಲಿಗೆ, ಹೆತ್ತ ತಾಯಿ ನೀನು ಎಂತಲೂ ಹೇಳುವ ಪ್ರಜೆಗಳು, ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಜನರ ಕೈಗೆ ಸಿಕ್ಕಿಬಿದ್ದಾಗ ಕಳ್ಳನಿಗೆ ನಾಚಿಕೆಯಾಗುತ್ತದೆ. ಅದೇ ರೀತಿಯಲ್ಲಿ ಇಸ್ರೇಲ್ ವಂಶವು ನಾಚಿಕೆಪಡುತ್ತದೆ. ರಾಜರು ಮತ್ತು ನಾಯಕರು ನಾಚಿಕೆಪಡುವರು. ಯಾಜಕರು ಮತ್ತು ಪ್ರವಾದಿಗಳು ನಾಚಿಕೆಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲ್ ಜನರಿಗೆ ನಾಚಿಕೆ ಆಯಿತು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು. ಅಧ್ಯಾಯವನ್ನು ನೋಡಿ |