ಯೆರೆಮೀಯ 2:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನೀವು ಎಂಥಾ ದುರ್ವಂಶ! ಯೆಹೋವನ ಮಾತನ್ನು ನೋಡಿರಿ, ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ ಗಾಢಾಂಧಕಾರದ ಪ್ರದೇಶವಾಗಿಯೂ ಪರಿಣವಿುಸಿದ್ದೆನೋ? ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು ಎಂದು ನನ್ನ ಜನರು ಹೇಳುವದು ಹೇಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 “ಇಸ್ರಾಯೇಲರೇ, ನೀವು ಯೆಹೋವ ದೇವರ ವಾಕ್ಯವನ್ನು ಗಮನಿಸಿರಿ: “ನಾನು ಇಸ್ರಾಯೇಲಿನ ಮರುಭೂಮಿಯಾದೆನೋ? ಗಾಡಾಂಧಕಾರದ ದೇಶವಾದೆನೋ? ನನ್ನ ಜನರು, ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ, ನಾವು ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವುದಿಲ್ಲ,’ ಎಂದು ಹೇಳುವುದು ಹೇಗೆ? ಅಧ್ಯಾಯವನ್ನು ನೋಡಿ |
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.