Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ನೀವಾದರೋ, ‘ನಾವು ನಿರ್ದೋಷಿಗಳು, ಸರ್ವೇಶ್ವರನ ಕೋಪ ನಮ್ಮ ಮೇಲಿಂದ ತೊಲಗಿಹೋಗಿದೆ, ಇದು ನಿಶ್ಚಯ’ ಎಂದುಕೊಂಡಿದ್ದೀರಿ. ‘ನಾವು ಪಾಪಮಾಡಿಲ್ಲ’ ಎಂದು ನೀವು ಹೇಳಿದ ಕಾರಣ ನಿಮ್ಮನ್ನು ನ್ಯಾಯತೀರ್ಪಿಗೆ ಗುರಿಮಾಡಿಯೇ ತೀರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನೀನಾದರೆ - ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ತೊಲಗಿ ಹೋಗಿದೆ ನಿಶ್ಚಯ ಎಂದುಕೊಂಡಿದ್ದೀ; ನಾನು ಪಾಪಮಾಡಲಿಲ್ಲವೆಂದು ನೀನು ಹೇಳಿದ ಕಾರಣ, ಇಗೋ ನಾನು ನಿನಗೆ ನ್ಯಾಯತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆದರೆ ನೀನು, ‘ನಾನು ತಪ್ಪು ಮಾಡಿಲ್ಲ. ದೇವರು ನನ್ನ ಮೇಲೆ ಕೋಪಗೊಂಡಿಲ್ಲ’ ಎಂದು ಹೇಳುತ್ತಿರುವೆ. ಆದ್ದರಿಂದ ನೀನು ಸುಳ್ಳು ಹೇಳಿದ ಅಪರಾಧಿಯೆಂದು ನಾನು ನಿನಗೆ ತೀರ್ಪುನೀಡುತ್ತೇನೆ. ಏಕೆಂದರೆ ‘ನಾನು ಯಾವ ತಪ್ಪೂ ಮಾಡಿಲ್ಲ’ ಎಂದು ನೀನು ಹೇಳಿಕೊಳ್ಳುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆದರೂ ನೀನು, ‘ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ದೇವರ ಕೋಪವು ನನ್ನನ್ನು ಬಿಟ್ಟು ತಿರುಗುವುದು,’ ಎಂದು ಹೇಳುತ್ತೀ. ನೀನು, ‘ನಾನು ಪಾಪಮಾಡಲಿಲ್ಲ’ ಎಂದು ಹೇಳುವುದರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:35
11 ತಿಳಿವುಗಳ ಹೋಲಿಕೆ  

ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.


ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ.


ಯೆಹೋವನು ಹೀಗೆನ್ನುತ್ತಾನೆ, “ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀರಿ? ನೀವೆಲ್ಲರೂ ನನಗೆ ದ್ರೋಹಿಗಳು.


“ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.


ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು” ಎಂದು ಯೆಹೋವನು ನುಡಿಯುತ್ತಾನೆ.


“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.


‘ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನು ಪಾಪವಿಲ್ಲ.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬಿಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.


ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು