Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು; ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತಾವಮಾನಕ್ಕೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಯೆಹೋವನು ನನ್ನೊಡನಿದ್ದಾನೆ. ಯೆಹೋವನು ಒಬ್ಬ ಶೂರ ಯೋಧನಂತಿದ್ದಾನೆ. ಆದ್ದರಿಂದ ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿದ್ದ ಜನರು ಬೀಳುತ್ತಾರೆ. ಅವರು ನನ್ನನ್ನು ಸೋಲಿಸಲಾರರು. ಆ ಜನರು ಸೋತುಹೋಗುತ್ತಾರೆ. ಅವರಿಗೆ ಆಶಾಭಂಗವಾಗುತ್ತದೆ. ಅವರಿಗೆ ನಾಚಿಕೆಯಾಗುತ್ತದೆ. ಅವರು ಆ ನಾಚಿಕೆಯನ್ನು ಎಂದೂ ಮರೆಯಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಯೆಹೋವ ದೇವರು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾರೆ. ಆದ್ದರಿಂದ ನನ್ನನ್ನು ಹಿಂಸಿಸುವವರು ಎಡವುವರು, ಗೆಲ್ಲುವುದಿಲ್ಲ. ಅನುಕೂಲವಾಗದೆ ಇದ್ದುದರಿಂದ ಅವರು ಬಹಳವಾಗಿ ನಾಚಿಕೆಪಡುವರು. ಅವರ ಅವಮಾನವು ಎಂದಿಗೂ ಮರೆಯದ ಅವಮಾನವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:11
25 ತಿಳಿವುಗಳ ಹೋಲಿಕೆ  

ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.


ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.


ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.


ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ. ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.


ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.


ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಮತ್ತು ನಾನು ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.’”


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ ಮುಳುಗುವರು.


ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.


ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.


ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


“ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ.


ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.


ನಿನ್ನನ್ನು ಅಟ್ಟಿಕೊಂಡು ಹೋಗುವ ಕುರುಬರನ್ನು ಗಾಳಿಯು ಅಟ್ಟಿಬಿಡುವುದು. ನಿನ್ನೊಂದಿಗೆ ವ್ಯಭಿಚಾರ ಮಾಡಿದವರು ಸೆರೆಹೋಗುವರು; ಆಗ ನಿನ್ನ ಸಕಲ ದುಷ್ಕೃತ್ಯಗಳ ನಿಮಿತ್ತ ನೀನು ಆಶಾಭಂಗಪಟ್ಟು ಅವಮಾನಕ್ಕೀಡಾಗುವುದು ಖಂಡಿತ.


ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.


ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು