ಯೆರೆಮೀಯ 20:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಮುಂಜಾನೆಯಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರನು ಕನಿಕರಿಸದೆ ಕೆಡವಿಬಿಟ್ಟ ಪಟ್ಟಣದ ಗತಿ ಅವನಿಗಾಗಲಿ ! ಬೆಳಿಗ್ಗೆ ಕಿರುಚಾಟ, ನಡುಹಗಲಲ್ಲಿ ಕೂಗಾಟ ಅವನ ಕಿವಿಗೆ ಬೀಳಲಿ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಪ್ರಾತಃಕಾಲದಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ನಗರಗಳ ಗತಿಯು ಅವನಿಗೆ ಬರಲಿ. ಬೆಳಿಗ್ಗೆ ಯುದ್ಧದ ಕೂಗಾಟವೂ, ಮಧ್ಯಾಹ್ನದಲ್ಲಿ ಯುದ್ಧದ ಕಿರುಚಾಟವೂ ಅವನ ಕಿವಿಗೆ ಬೀಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆ ಮನುಷ್ಯನು, ಯೆಹೋವ ದೇವರು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಅವನು ಬೆಳಿಗ್ಗೆ ಕೂಗನ್ನೂ, ಮಧ್ಯಾಹ್ನದಲ್ಲಿ ಆರ್ಭಟವನ್ನೂ ಕೇಳಲಿ. ಅಧ್ಯಾಯವನ್ನು ನೋಡಿ |
ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”