ಯೆರೆಮೀಯ 20:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಆಗ ನಾನು ಆತನನ್ನು ಕುರಿತು ಏನೂ ಹೇಳುವುದಿಲ್ಲ. ಆತನ ಹೆಸರಿನಲ್ಲಿ ಇನ್ನು ಮಾತನಾಡುವುದೇ ಇಲ್ಲ,” ಎಂದು ಅಂದುಕೊಂಡೆನು. ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲಾಗಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು. ಬಿಗಿ ಹಿಡಿದು ದಣಿದೆನು. ನನ್ನಿಂದ ಆಗದೆ ಹೋಯಿತು. ಅಧ್ಯಾಯವನ್ನು ನೋಡಿ |