Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ನಗರಕ್ಕೆ ಒಳಿತನ್ನು ಅಲ್ಲ, ಕೆಡುಕನ್ನು ಮಾಡಲೆಂದೆ ಇದರ ಮೇಲೆ ಕಣ್ಣಿಟ್ಟಿದ್ದೇನೆ. ಇದು ಬಾಬಿಲೋನಿಯಾದ ಅರಸನ ಕೈವಶವಾಗುವುದು. ಅವನು ಇದನ್ನು ಸುಟ್ಟು ಭಸ್ಮಮಾಡುವನು. ಇದು ಸರ್ವೇಶ್ವರನಾದ ನನ್ನ ನುಡಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೇಲಿಗಲ್ಲ ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವದು, ಅವನು ಸುಟ್ಟು ಬಿಡುವನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜೆರುಸಲೇಮ್ ನಗರಕ್ಕೆ ತೊಂದರೆಯನ್ನು ಉಂಟುಮಾಡಬೇಕೆಂದು ನಾನು ನಿಶ್ಚಯಿಸಿದ್ದೇನೆ. ನಾನು ಈ ನಗರಕ್ಕೆ ಸಹಾಯಮಾಡುವದಿಲ್ಲ.’” ಇದು ಯೆಹೋವನಿಂದ ಬಂದ ಸಂದೇಶ. “‘ಜೆರುಸಲೇಮ್ ನಗರವನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ಅವನು ಅದನ್ನು ಬೆಂಕಿಯಿಂದ ಸುಟ್ಟುಹಾಕುತ್ತಾನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವುದು. ಏಕೆಂದರೆ ನಾನು ಒಳ್ಳೆಯದಕ್ಕಲ್ಲ, ಕೆಟ್ಟದ್ದಕ್ಕೆ ಈ ಪಟ್ಟಣಕ್ಕೆ ವಿರೋಧವಾಗಿ ನನ್ನ ಮುಖವನ್ನಿಟ್ಟಿದ್ದೇನೆಂದು ಯೆಹೋವ ದೇವರು ಅನ್ನುತ್ತಾರೆ. ಅದು ಬಾಬಿಲೋನಿನ ಅರಸನ ಕೈಯಲ್ಲಿ ಒಪ್ಪಿಸಲಾಗುವುದು. ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:10
26 ತಿಳಿವುಗಳ ಹೋಲಿಕೆ  

“ಆದಕಾರಣ ಇಸ್ರಾಯೇಲಿನ ದೇವರೂ, ಸೇನಾಧೀಶ್ವರನು ಆದ ಯೆಹೋವನು ಹೀಗೆನ್ನುತ್ತಾನೆ, ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.


ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು. ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.”


ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗ, ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.


ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.


ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.


ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರಮಿಸುವನು; ಅದು ಅವನ ಸೈನ್ಯದ ವಶವಾಗುವುದು ಖಂಡಿತ” ಎಂದು ಸಾರುತ್ತಿದ್ದನು.


ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.


ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.


ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.


ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


“‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.


ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.


ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವುದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪ ರೋಷಭರಿತನಾದ ನಾನೇ ಇವರನ್ನು ಹತಿಸುವೆನು.


“ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.


“ಆ ಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಿನ ಕಲ್ಮಷವು ಕರಗಿ, ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.


ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಉರಿಸುವೆನು. ಅದು ಯೆರೂಸಲೇಮಿನ ಅರಮನೆಗಳನ್ನು ನುಂಗಿಬಿಡುವುದು.”


ಆಗ ಯೆರೆಮೀಯನು ಚಿದ್ಕೀಯನಿಗೆ, “ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಈ ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು