Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ ಮುಂಜಾನೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದಾವೀದನ ಮನೆಯವರೇ, ಯೆಹೋವ ದೇವರು ಹೇಳುವುದೇನೆಂದರೆ, “ ‘ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:12
46 ತಿಳಿವುಗಳ ಹೋಲಿಕೆ  

ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.


ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”


ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ.


ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.


ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”


ಕೊಬ್ಬಿ ಢಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು.


ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.


ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.


ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.’ ಇದು ಕರ್ತನಾದ ಯೆಹೋವನ ನುಡಿ.”


ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.


ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.


ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು, “ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು.


ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?


ಅರಾಮ್ಯರು ಎಫ್ರಾಯೀಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.


ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!


ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.


ನಾನೇ ಕೋಪ, ರೋಷ, ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು.


ಅನ್ಯಾಯಗಾರನ ಕೋರೆಗಳನ್ನು ಮುರಿದು, ಅವನ ಹಲ್ಲುಗಳಿಂದ ಬೇಟೆಯನ್ನು ಕಿತ್ತು ತರುತ್ತಿದ್ದೆನು.


ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.


ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.


ಮರುದಿನ ಮೋಶೆ ಜನರಿಗೆ ನ್ಯಾಯತೀರಿಸುವುದಕ್ಕಾಗಿ ಕುಳಿತಿರಲು ಮುಂಜಾನೆಯಿಂದ ಸಾಯಂಕಾಲದವರೆಗೂ ಜನರು ಅವನ ಹತ್ತಿರ ನಿಂತಿದ್ದರು.


ನೀವು ನಿಮ್ಮ ನಡತೆಯನ್ನು ಮತ್ತು ಕೃತ್ಯಗಳನ್ನು ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿ ಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿರಿ.


ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.


ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು