Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ದುಷ್ಕೃತ್ಯಗಳಿಗೆ ವಿಧಿಸುವೆನು ತಕ್ಕ ದಂಡನೆ, ಬೆಂಕಿ ಹಚ್ಚುವೆನು ನಿಮ್ಮ ಪುರಿಯೆಂಬ ವನಕ್ಕೆ, ಅದು ಕಬಳಿಸಿಬಿಡುವುದು ಸುತ್ತಮುತ್ತಣ ವಸ್ತುಗಳನ್ನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರಿಯೆಂಬ ವನಕ್ಕೆ ಬೆಂಕಿಹಚ್ಚುವೆನು, ಅದು ಸುತ್ತುಮುತ್ತಣದನ್ನೆಲ್ಲಾ ನುಂಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನೀವು ತಕ್ಕ ಶಿಕ್ಷೆಯನ್ನು ಅನುಭವಿಸುವಿರಿ. ನಾನು ನಿಮ್ಮ ಅರಣ್ಯಗಳಲ್ಲಿ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ನಿಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಸ್ತುವನ್ನು ಸುಟ್ಟುಹಾಕುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸುತ್ತೇನೆ, ಎಂದು ಯೆಹೋವ ದೇವರು ಹೇಳುತ್ತಾರೆ. ಅದರ ಅಡವಿಗೆ ಬೆಂಕಿ ಹಚ್ಚುತ್ತೇನೆ. ಅದರ ಸುತ್ತಲಿಗಿರುವುದನ್ನೆಲ್ಲಾ ಅದು ನುಂಗಿಬಿಡುವುದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:14
29 ತಿಳಿವುಗಳ ಹೋಲಿಕೆ  

ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.


ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.


ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.


“ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ.


ಲೆಬನೋನೇ, ನಿನ್ನ ಬಾಗಿಲುಗಳನ್ನು ತೆರೆ, ಬೆಂಕಿಯು ನಿನ್ನ ದೇವದಾರುಗಳನ್ನು ನುಂಗಲಿ!


ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನ್ನ ವಿರುದ್ಧವಾಗಿ ಸಿದ್ಧಪಡಿಸುವೆನು; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.


ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ.


ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.


ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ, ಭೂಮಂಡಲದ ಒಡೆಯರನ್ನೂ ದಂಡಿಸುವನು.


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”


ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.


ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.


ಯೆಹೋವನು ನನಗೆ ಹೀಗೆ ಅಪ್ಪಣೆಕೊಟ್ಟನು, “ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು,


ಅವರು ಮಿಡತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದುಹಾಕುವರು, ಇದು ಯೆಹೋವನ ನುಡಿ.


ಸೊಕ್ಕಿನ ರಾಜ್ಯವು ಎಡವಿ ಬೀಳುವುದು, ಅದನ್ನು ಯಾರೂ ಎತ್ತರು; ಅದರ ಪಟ್ಟಣಗಳಿಗೆ ಬೆಂಕಿಹೊತ್ತಿಸುವೆನು, ಅದು ಸುತ್ತಲಿರುವುದನ್ನು ನುಂಗಿಬಿಡುವುದು.”


ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು, ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ, ಸುತ್ತಮುತ್ತಲು ನುಂಗುವ ಅಗ್ನಿಜ್ವಾಲೆಯಂತೆ ಯಾಕೋಬನ್ನು ದಹಿಸಿಬಿಟ್ಟಿದ್ದಾನೆ.


ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು.


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.


ಆದರೆ ಅಷ್ಟರೊಳಗೆ ಈ ದೇಶವು ತನ್ನ ನಿವಾಸಿಗಳ ನಿಮಿತ್ತ ಅವರ ದುಷ್ಕೃತ್ಯಗಳ ಫಲವಾಗಿ ಹಾಳುಬಿದ್ದಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು