Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:7
37 ತಿಳಿವುಗಳ ಹೋಲಿಕೆ  

ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.


ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.


ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ.


ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು.


ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”


ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.


ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.


ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಪ್ರಲಾಪಿಸುವರು? ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು?


ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ, ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಳುಗಿದ್ದಾನೆ, ಆಶಾಭಂಗಪಟ್ಟು ಅವಮಾನಕ್ಕೆ ಈಡಾಗಿದ್ದಾಳೆ. ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು’” ಇದು ಯೆಹೋವನ ನುಡಿ.


ನಿನ್ನ ಪ್ರಾಣವನ್ನು ಹುಡುಕಿ ನಿನ್ನಲ್ಲಿ ಭಯವನ್ನು ಹುಟ್ಟಿಸುವವರ ಕೈಗೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು.


ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.


ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ, ನಿನ್ನ ಆಶೆಯು ಯಾರಿಂದ ಹಿಂದಿರುಗಿತೋ ಅವರ ಕೈಗೆ ನಿನ್ನನ್ನು ನಾನು ಒಪ್ಪಿಸಲು,


ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.


ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.


ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.


ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತನಾಡುವನು.


ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.


ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?


ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು