Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ ಹೀಗೆ ಅಪ್ಪಣೆಕೊಟ್ಟನು, “ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಎಂದು ಆಜ್ಞೆಮಾಡಿದರು: “ನೀನು ಜುದೇಯದ ಅರಸನ ಮನೆಗೆ ಹೋಗು. ಅಲ್ಲಿ ಈ ಮಾತನ್ನು ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು [ನನಗೆ] ಹೀಗೆ ಅಪ್ಪಣೆಕೊಟ್ಟನು - ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೇಳಿದನು: “ಯೆರೆಮೀಯನೇ, ರಾಜನ ಅರಮನೆಗೆ ಹೋಗು. ಯೆಹೂದದ ರಾಜನ ಬಳಿಗೆ ಹೋಗಿ ಅಲ್ಲಿ ಈ ಸಂದೇಶವನ್ನು ಸಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಹೀಗೆ ಹೇಳುತ್ತಾನೆ: “ಯೆಹೂದದ ಅರಸನ ಮನೆಗೆ ಇಳಿದು ಹೋಗಿ, ಅಲ್ಲಿ ಈ ವಾಕ್ಯವನ್ನು ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:1
15 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.


ಇದರ ನಿಮಿತ್ತ ಯೋಹಾನನು ಹೆರೋದನಿಗೆ, “ನಿನ್ನ ಅಣ್ಣನ ಹೆಂಡತಿಯು ಆತನು ಬದುಕಿರುವಾಗಲೇ ನಿನ್ನವಳ್ಳಾಗಿರುವುದು ಅಧರ್ಮವಲ್ಲವೇ” ಎಂದು ಹೇಳುತ್ತಿದ್ದನು.


ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ” ಎಂದು ಹೇಳಿದನು.


ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.


ಯೆಹೂದದ ಅರಸನ ಮನೆತನದ ವಿಷಯವಾಗಿ ಯೆಹೋವನು ಹೇಳಿರುವ ಈ ಮಾತನ್ನು ಕೇಳಿರಿ.


ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.


ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ದಾವೀದನ ಹತ್ತಿರ ಬಂದು ಹೇಳಿದ್ದೇನೆಂದರೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು ಇನ್ನೊಬ್ಬನು ಬಡವನು.


ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.


ದಾವೀದನ ಸಿಂಹಾಸನರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಮತ್ತು ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು