ಯೆರೆಮೀಯ 22:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ತನ್ನ ಅರಮನೆಯನ್ನು ದುರ್ನೀತಿಯಿಂದಲೂ, ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ನೆರೆಯವನಿಗೆ ಕೂಲಿಕೊಡದೆ ಬಿಟ್ಟಿಕೆಲಸ ಮಾಡಿಸಿಕೊಂಡು ಅರಮನೆಯನ್ನು ಕಟ್ಟಿಸಿಕೊಳ್ಳುವವನಿಗೆ ಧಿಕ್ಕಾರ ! ಅವನು ಅರಮನೆಯನ್ನು ಕಟ್ಟಿಸಿಕೊಳ್ಳುವುದು ಅನೀತಿಯಿಂದ ಮಹಡಿಗಳನ್ನು ನಿರ್ಮಿಸಿಕೊಳ್ಳುವುದು ಅನ್ಯಾಯದಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ತನ್ನ ಅರಮನೆಯನ್ನು ದುರ್ನೀತಿಯಿಂದಲೂ ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ರಾಜನಾದ ಯೆಹೋಯಾಕೀಮನಿಗೆ ದುರ್ಗತಿ ಉಂಟಾಗುವುದು. ಅವನು ತನ್ನ ಅರಮನೆಯನ್ನು ಕಟ್ಟಿಸುವದಕ್ಕೋಸ್ಕರ ದುರ್ನೀತಿಯನ್ನು ಅವಲಂಭಿಸಿದ್ದಾನೆ. ಮಹಡಿಯ ಮೇಲೆ ಕೋಣೆಗಳನ್ನು ಕಟ್ಟಿಸುವದಕ್ಕಾಗಿ ಅವನು ತನ್ನ ಜನರನ್ನು ವಂಚಿಸುತ್ತಿದ್ದಾನೆ. ಅವನು ತನ್ನ ಜನರಿಂದ ಬಿಟ್ಟಿಕೆಲಸವನ್ನು ಮಾಡಿಸುತ್ತಿದ್ದಾನೆ. ಅವರಿಂದ ಕೆಲಸ ಮಾಡಿಸಿಕೊಂಡು ಅವರಿಗೆ ಕೂಲಿಯನ್ನೇ ಕೊಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಅನೀತಿಯಿಂದ ತನ್ನ ಅರಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳುವವನಿಗೂ, ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸ ತೆಗೆದುಕೊಳ್ಳುವವನೂ ಕಷ್ಟ! ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.