Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇವನನ್ನು ಯೆರೂಸಲೇಮಿನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಡಿ ಮಣ್ಣುಪಾಲು ಮಾಡುವರು” ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇವನನ್ನು ಜೆರುಸಲೇಮಿನ ಬಾಗಿಲ ಹೊರಗಡೆ ಬಿಸಾಡುವರು ಕತ್ತೆಗೆ ತಕ್ಕ ಮರ್ಯಾದೆಯೊಂದಿಗೆ ಹೂಣುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇವನನ್ನು ಯೆರೂಸಲೇವಿುನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಟು ಮಣ್ಣುಪಾಲುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಜೆರುಸಲೇಮಿನ ಜನರು ಯೆಹೋಯಾಕೀಮನನ್ನು ಒಂದು ಕತ್ತೆಯನ್ನು ಹೂಳಿದಂತೆ ಹೂಳಿಬಿಡುತ್ತಾರೆ. ಅವರು ಅವನ ಶವವನ್ನು ದೂರ ಎಳೆದುಕೊಂಡು ಹೋಗುತ್ತಾರೆ. ಅವನ ಶವವನ್ನು ಜೆರುಸಲೇಮಿನ ದ್ವಾರಗಳ ಹೊರಗೆ ಎಸೆದುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕತ್ತೆಯನ್ನು ಹೂಳಿಡುವ ಪ್ರಕಾರ ಅವನನ್ನು ಹೂಳಿಡುವರು. ಅವನನ್ನು ಎಳೆದುಕೊಂಡು ಹೋಗಿ, ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:19
13 ತಿಳಿವುಗಳ ಹೋಲಿಕೆ  

ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು.


ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.


“ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು” ಎಂಬುದು ಯೆಹೋವನಾದ ನನ್ನ ಮಾತು.


ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,


ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳ ಹೊರತಾಗಿ ಬೇರೇನೂ ಸಿಕ್ಕಲಿಲ್ಲ.


ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.


ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ರೂಮನ ಪೆದಾಯನ ಮಗಳಾದ ಜೆಬೂದಾ ಎಂಬಾಕೆಯು ಅವನ ತಾಯಿ.


ಯೆಹೋಯಾಕೀಮನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು.


ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.


ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.


ಆಗ ಜನಾಂಗಗಳು ಸುತ್ತಲಿನ ರಾಷ್ಟ್ರಗಳಿಂದ ಕೂಡಿ ಬಂದು, ಅದಕ್ಕೆ ವಿರುದ್ಧವಾಗಿ ನಿಂತು, ಬಲೆಯೊಡ್ಡಿ ಗುಂಡಿ ತೋಡಲು, ಅದು ಅಲ್ಲಿ ಸಿಕ್ಕಿಬಿದ್ದಿತು.


ನೀನು ತೆರೆದ ಬಯಲಿನಲ್ಲಿ ಬೀಳುವಿ. ಏಕೆಂದರೆ ನಾನೇ ಅಪ್ಪಣೆ ಕೊಟ್ಟಿದ್ದೇನೆ’ ಎಂದು ಕರ್ತನಾದ ಯೆಹೋವನ ನುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು