ಯೆರೆಮೀಯ 22:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನೀನು ನೆಮ್ಮದಿಯಾಗಿದ್ದ ಕಾಲದಲ್ಲಿ ನಿನ್ನೊಡನೆ ಮಾತಾಡಿದೆ ಆದರೆ ನೀನು, “ಕೇಳಲೊಲ್ಲೆ” ಎಂದು ಹೇಳಿಬಿಟ್ಟೆ. ನನ್ನ ಮಾತಿಗೆ ಕಿವಿಗೊಡದಿರುವುದು ನಿನಗೆ ಬಾಲ್ಯದಿಂದಲೆ ವಾಡಿಕೆ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾನು ನಿನ್ನ ನೆಮ್ಮದಿಯಲ್ಲಿ ನಿನ್ನೊಡನೆ ಮಾತಾಡಿದಾಗ ಕೇಳಲೊಲ್ಲೆನು ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವದು ನಿನಗೆ ಬಾಲ್ಯದಿಂದಲೇ ಅಭ್ಯಾಸ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಯೆಹೂದವೇ, ನೀನು ಸುರಕ್ಷಿತಳಾಗಿರುವೆ ಎಂದು ನೀನು ಭಾವಿಸಿಕೊಂಡಿರುವೆ. ಆದರೆ ನಾನು ನಿನಗೆ ಎಚ್ಚರಿಕೆಯನ್ನು ಕೊಟ್ಟೆ. ಹೌದು, ನಾನೇ ಎಚ್ಚರಿಕೆಯನ್ನು ಕೊಟ್ಟೆ, ಆದರೆ ನೀನು ಅದನ್ನು ಕಿವಿಗೆ ಹಾಕಿಕೊಳ್ಳಲು ಒಪ್ಪಲಿಲ್ಲ. ನಿನ್ನ ಬಾಲ್ಯದಿಂದಲೂ ನೀನು ಹೀಗೆಯೇ ಮಾಡಿದೆ. ಯೆಹೂದವೇ, ನಿನ್ನ ಬಾಲ್ಯದಿಂದಲೂ ನೀನು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿನ್ನ ಏಳಿಗೆಗೆ ನಿನ್ನ ಸಂಗಡ ಮಾತನಾಡಿದೆನು. ಆದರೆ ನೀನು, ‘ನಾನು ಕೇಳುವುದಿಲ್ಲ,’ ಎಂದೆ. ನನ್ನ ಮಾತಿಗೆ ಕಿವಿಗೊಡದೆ ಇರುವುದೇ ನಿನ್ನ ಯೌವನದ ರೀತಿಯಾಗಿದೆ. ಅಧ್ಯಾಯವನ್ನು ನೋಡಿ |
ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.