ಯೆರೆಮೀಯ 22:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನು ಹೀಗನ್ನುತ್ತಾನೆ - ನೀತಿನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ; ವಿದೇಶಿ, ಅನಾಥ, ವಿಧವೆ, ಇವರಿಗೆ ಯಾವ ಅನ್ಯಾಯವನ್ನೂ ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.