Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ, ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡು ನಡೆದಿರಾದರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿ ತಮ್ಮ ಪರಿವಾರದೊಡನೆ ಹಾಗು ಪ್ರಜೆಗಳೊಡನೆ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಕೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಈ ಆಜ್ಞೆಗಳನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಈ ದ್ವಾರಗಳಿಂದ ಜೆರುಸಲೇಮ್ ನಗರವನ್ನು ಪ್ರವೇಶಿಸುವುದು ಮುಂದುವರೆಯುತ್ತದೆ. ಆ ರಾಜರು ತಮ್ಮ ಅಧಿಕಾರಿಗಳೊಂದಿಗೆ ಈ ದ್ವಾರಗಳಿಂದ ಬರುತ್ತಾರೆ. ಆ ಅರಸರು, ಅವರ ಅಧಿಕಾರಿಗಳು, ಅವರ ಜನರು, ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಕುಳಿತುಕೊಂಡು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ, ಆಗ ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವರೂ, ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡುವ ಅರಸರು ತಮ್ಮ ಸೇವಕರ ಮತ್ತು ತಮ್ಮ ಜನರಸಹಿತವಾಗಿ ಈ ಅರಮನೆಯ ಬಾಗಿಲುಗಳಿಂದ ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:4
2 ತಿಳಿವುಗಳ ಹೋಲಿಕೆ  

ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ, ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು. ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇಮಿನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು. ಈ ಪಟ್ಟಣವು ನಿತ್ಯವೂ ನೆಲೆಯಾಗಿರುವುದು.


ದಾವೀದನ ಸಿಂಹಾಸನರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಮತ್ತು ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು