Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ‘ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ, ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಅಂದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ‘ಈ ನಗರದವರು ತಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯನ್ನು ನಿರಾಕರಿಸಿ ಅನ್ಯದೇವತೆಗಳನ್ನು ಪೂಜಿಸಿ ಆರಾಧಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಹೇಳಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಪ್ರಶ್ನೆಗೆ ಈ ಉತ್ತರ: ‘ಯೆಹೂದದ ಜನರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಅನುಸರಣೆಯನ್ನು ಬಿಟ್ಟುಬಿಟ್ಟರು. ಅವರು ಬೇರೆ ದೇವರುಗಳ ಸೇವೆಯನ್ನು ಮಾಡಿ ಪೂಜಿಸಿದರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ‘ಆಗ ಅವರು ತಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮಸ್ಕರಿಸಿ ಸೇವಿಸಿದ್ದರಿಂದಲೇ,’ ಎಂದು ಅವರು ಉತ್ತರಕೊಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:9
16 ತಿಳಿವುಗಳ ಹೋಲಿಕೆ  

ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.


ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ’ ಅಂದುಕೊಂಡರು.


ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು.


ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.


ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ,


“ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ, ಪರಿಹಾಸ್ಯಗಳಿಗೂ, ಬುದ್ಧಿವಾದಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”


ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.


“ಇದಲ್ಲದೆ, ಇಸ್ರಾಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿ ಹೋದರೆಂತಲೂ, ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗದಿಂದ ಹತರಾಗುವಂತೆ ಅವರನ್ನು ಶತ್ರುಗಳ ವಶ ಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವುದು.


‘ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು?’ ಎಂಬುದಾಗಿ ವಿಚಾರಿಸುವರು.


ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು