ಯೆರೆಮೀಯ 23:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನೈತಿಕತೆಯನ್ನು ನೋಡಿದ್ದೇನೆ; ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ, ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಸಮಾರ್ಯದ ಪ್ರವಾದಿಗಳ ಅಸಹ್ಯ ಕಾರ್ಯಗಳನ್ನು ನೋಡಿರುವೆನು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿದರವರು ಹೀಗೆ ಇಸ್ರಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಸಮಾರ್ಯದ ಪ್ರವಾದಿಗಳಲ್ಲಿ ಅಯುಕ್ತವನ್ನು ನೋಡಿದ್ದೇನೆ; ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗತಪ್ಪಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದುಕೊಂಡದ್ದನ್ನು ನಾನು ನೋಡಿದ್ದೇನೆ. ಅವರು ಬಾಳ್ ದೇವತೆಗೋಸ್ಕರ ಆವೇಶದಿಂದ ಪ್ರವಾದಿಸಿದ್ದನ್ನು ನಾನು ಕಂಡಿದ್ದೇನೆ. ಆ ಪ್ರವಾದಿಗಳು ಇಸ್ರೇಲಿನ ಜನರನ್ನು ಯೆಹೋವನಿಂದ ದೂರ ತೆಗೆದುಕೊಂಡು ಹೋಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಸಮಾರ್ಯದ ಪ್ರವಾದಿಗಳಲ್ಲಿ ಅಸಹ್ಯಕರ ವಿಷಯವನ್ನು ನೋಡಿದ್ದೇನೆ. ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ, ನನ್ನ ಜನರಾದ ಇಸ್ರಾಯೇಲನ್ನು ತಪ್ಪುವಂತೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |