Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಸ್ರಯೇಲರ ದೇವರಾದ ಸರ್ವೇಶ್ವರ, ತಮ್ಮ ಜನರೆಂಬ ಕುರಿಗಳನ್ನು ಮೇಯಿಸುವ ಕುರಿಗಾಹಿಗಳ ದ್ರೋಹವನ್ನು ಅರಿತಿದ್ದಾರೆ. ಅಂಥವರನ್ನು ಕುರಿತು ಹೀಗೆನ್ನುತ್ತಾರೆ : “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟಿದ್ದೀರಿ. ಅವುಗಳ ಬಗ್ಗೆ ಎಚ್ಚರ ವಹಿಸಲೇ ಇಲ್ಲ. ನಿಮ್ಮ ನೀಚಕಾರ್ಯಗಳ ನಿಮಿತ್ತ ನಿಮ್ಮನ್ನು ವಿಚಾರಣೆಗೆ ಗುರಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ - ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ; ಆಹಾ, ನಿಮ್ಮ ದುಷ್ಕೃತ್ಯಗಳ ನಿವಿುತ್ತ ನಾನು ನಿಮ್ಮನ್ನು ವಿಚಾರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:2
21 ತಿಳಿವುಗಳ ಹೋಲಿಕೆ  

ಅವರಲ್ಲಿ ಉತ್ತಮನೂ ಮುಳ್ಳಿನ ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ. ನಿನ್ನ ಕಾವಲುಗಾರರು ಮುಂತಿಳಿಸಿದ ನಿನ್ನ ದಂಡನೆಯ ದಿನ ಬಂದಿದೆ. ಈಗ ನಿನ್ನ ಜನರಿಗೆ ಭ್ರಾಂತಿ ಹಿಡಿಯುವುದು.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.


ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”


ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, ‘ಯೆಹೋವನ ಹೊರೆ’ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು.


ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.


ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.


ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”


ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ.


ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.


ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.


ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು.


ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡೂ ಎಲ್ಲಿ?


ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.


ಕುರುಬರು ಇಲ್ಲವಾದುದರಿಂದ ಅವು ಚದುರಿ ಹೋದವು; ಚದುರಿ ಹೋಗಿ, ಕಾಡಿನ ಸಕಲ ಮೃಗಗಳಿಗೆ ತುತ್ತಾದವು.


ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ನೇಮಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದುರಿದವುಗಳನ್ನು ಹುಡುಕನು, ಊನವಾದವುಗಳನ್ನು ಗುಣಪಡಿಸನು, ನೆಟ್ಟಗಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರು ಮಾಡುವನು.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ. ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು