Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:24
28 ತಿಳಿವುಗಳ ಹೋಲಿಕೆ  

ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.


ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ?


ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.


ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ!


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.


ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?


ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.


ಆದರೆ ಆತನಿಗೋಸ್ಕರ ಆಲಯವನ್ನು ಕಟ್ಟುವುದಕ್ಕೆ ಶಕ್ತರಾರು! ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಾಗ ಆತನಿಗಾಗಿ ಆಲಯ ಕಟ್ಟಲು ಸಾಧ್ಯವಿಲ್ಲ. ಆತನ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು!


ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.


ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.


ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು.


ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು; ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.


ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.


ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು, ಅವನ ಹೆಜ್ಜೆಗಳನ್ನೆಲ್ಲಾ ನೋಡುವನು.


ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ, ಅನುಕೂಲವಾದ ಯಾವ ಕತ್ತಲೂ, ಯಾವ ಗಾಢಾಂಧಕಾರವೂ ಇರುವುದಿಲ್ಲ.


ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.


ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.


ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.


ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು