Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ‘ನನಗೆ ಕನಸು ಬಿತ್ತು, ಕನಸುಬಿತ್ತು’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದನೆ ಮಾಡುವವರ ನುಡಿಯನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನನ್ನ ಹೆಸರಿನಿಂದ ಸುಳ್ಳುಬೋಧನೆ ಮಾಡುವ ಪ್ರವಾದಿಗಳಿದ್ದಾರೆ. ಅವರು ‘ನಾನೊಂದು ಕನಸು ಕಂಡೆ, ನಾನೊಂದು ಕನಸು ಕಂಡೆ’ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ ‘ನನಗೆ ಕನಸು ಬಿತ್ತು, ಕನಸು ಬಿತ್ತು,’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:25
24 ತಿಳಿವುಗಳ ಹೋಲಿಕೆ  

ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.


ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.


ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.


ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.


ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.


ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.


ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.


ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?


ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ, ನೀನು ಅರಿಯದೆ ಇರುವಂಥದು ಒಂದೂ ಇಲ್ಲ.


ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.


ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು.


ಒಂದು ದಿನ ಯೋಸೇಫನು ಕನಸು ಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.


ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.


ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.’”


ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು.


ಅಲ್ಲಿನ ಸುಳ್ಳು ಪ್ರವಾದಿಗಳು ಇವರಿಗಾಗಿ ವ್ಯರ್ಥ ದರ್ಶನವನ್ನೂ, ಸುಳ್ಳು ಕಣಿಯನ್ನೂ ಕಂಡು ಯೆಹೋವನು ಅವರೊಂದಿಗೆ ಮಾತನಾಡದಿದ್ದರೂ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಾ ಮೇಲೆ ಸುಣ್ಣ ಹಚ್ಚುತ್ತಾರೆ.


ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು