28 ಹೊಟ್ಟು, ಗೋಧಿಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನ್ನ ಸಂದೇಶಗಳಲ್ಲ. ಒಬ್ಬ ವ್ಯಕ್ತಿಗೆ ತನ್ನ ಕನಸಿನ ಬಗ್ಗೆ ಹೇಳಬೇಕೆನಿಸಿದರೆ, ಅವನು ಹೇಳಲಿ. ಆದರೆ ನನ್ನ ಸಂದೇಶವನ್ನು ಕೇಳಿದ ಮನುಷ್ಯನು ಆ ಸಂದೇಶವನ್ನು ಯಥಾರ್ಥವಾಗಿ ಹೇಳಲಿ.
28 ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.
ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;
ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.
ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?
ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;
ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು” ಎಂದು ಉತ್ತರಕೊಟ್ಟನು.