Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ? ನನ್ನ ವಾಕ್ಯ ಬೆಂಕಿಗೆ ಸಮಾನ; ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನನ್ನ ಸಂದೇಶವು ಬೆಂಕಿಯ ಜ್ವಾಲೆಯಂತಿದೆ. ಅದು ಕಲ್ಲುಬಂಡೆಯನ್ನು ಒಡೆದುಹಾಕುವ ಸುತ್ತಿಗೆಯಂತಿದೆ” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:29
11 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.


ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು, “ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು.


ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು,


“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.


ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು ಉಂಟುಮಾಡಬಯಸುವವರಿಗೆ ಆ ರೀತಿಯಾಗಿ ಹತರಾಗಬೇಕು.


ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.


ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು.


ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;


ನಾವು ವಿನಾಶಮಾರ್ಗದಲ್ಲಿರುವವರಿಗೆ ಮೃತ್ಯುಕಾರಕ ಗಂಧ; ರಕ್ಷಣಾಮಾರ್ಗದಲ್ಲಿರುವವರಿಗೆ ಸಜೀವದಾಯಕ ಸುಗಂಧ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?


ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು