Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ‘ಸರ್ವೇಶ್ವರನ ಹೊರೆ’ ಎಂಬ ಮಾತನ್ನು ಎತ್ತಲೇಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೊಂದು ಹೊರೆ. ಜೀವಸ್ವರೂಪರಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೆಹೋವನ ಭಾರ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಭಾರವಾಗಿರುವದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆಕೆಳಗು ಮಾಡಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಬ ಮಾತನ್ನು ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗಬೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನ್ನು ತಲೆಕೆಳಗೆ ಮಾಡಿದ್ದೀರಿ. ಆತನು ಸರ್ವಶಕ್ತನಾಗಿದ್ದಾನೆ ಮತ್ತು ಜೀವಸ್ವರೂಪನಾದ ದೇವರಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ‘ಯೆಹೋವ ದೇವರ ಹೊರೆ,’ ಎಂಬ ಮಾತನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೆ ಹೊರೆ. ಜೀವಸ್ವರೂಪನಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರ ಯೆಹೋವ ದೇವರ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:36
24 ತಿಳಿವುಗಳ ಹೋಲಿಕೆ  

ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.


ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು. ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?


ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.


ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.


ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ


ಏಕೆಂದರೆ ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು.


“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?


ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.


ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.


ವಕ್ರ ಹೃದಯನು ಶುಭವನ್ನು ಪಡೆಯನು, ಕೆಟ್ಟ ನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.


ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ.


ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,


ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?


ನೀವು ‘ಯೆಹೋವನಿಂದ ನಿನಗೆ ಯಾವ ಉತ್ತರವಾಯಿತು, ಯೆಹೋವನು ಏನು ನುಡಿದಿದ್ದಾನೆ’ ಎಂದು ಪ್ರವಾದಿಯನ್ನು ಕೇಳಿರಿ.


ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು