Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನೀವು ‘ಯೆಹೋವನಿಂದ ನಿನಗೆ ಯಾವ ಉತ್ತರವಾಯಿತು, ಯೆಹೋವನು ಏನು ನುಡಿದಿದ್ದಾನೆ’ ಎಂದು ಪ್ರವಾದಿಯನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 “ಸರ್ವೇಶ್ವರನಿಂದ ನಿಮಗೆ ಯಾವ ಉತ್ತರ ದೊರಕಿತು? ಸರ್ವೇಶ್ವರ ಏನು ನುಡಿದಿದ್ದಾರೆ?” ಎಂದು ಪ್ರವಾದಿಯನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಯೆಹೋವನಿಂದ ನಿನಗೆ ಯಾವ ಉತ್ತರವಾಯಿತು, ಯೆಹೋವನು ಏನು ನುಡಿದಿದ್ದಾನೆ ಎಂದು ಪ್ರವಾದಿಯನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ನೀವು ದೇವರ ಸಂದೇಶವನ್ನು ತಿಳಿದುಕೊಳ್ಳ ಬಯಸಿದರೆ ಪ್ರವಾದಿಯನ್ನು ಕುರಿತು ‘ಯೆಹೋವನು ನಿನಗೆ ಏನೆಂದು ಉತ್ತರವನ್ನು ಕೊಟ್ಟನು?’ ಅಥವಾ ‘ಯೆಹೋವನು ಏನು ಹೇಳಿದನು?’ ಎಂದು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ‘ಯೆಹೋವ ದೇವರಿಂದ ನಿಮಗೆ ಯಾವ ಉತ್ತರ ದೊರಕಿತು? ಯೆಹೋವ ದೇವರು ಏನು ನುಡಿದಿದ್ದಾರೆ?’ ಎಂದು ಪ್ರವಾದಿಯನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:37
3 ತಿಳಿವುಗಳ ಹೋಲಿಕೆ  

ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.


ಒಂದು ವೇಳೆ ನೀವು ‘ಯೆಹೋವನ ಹೊರೆ’ ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ, ‘ನಾನು ನಿಮಗೆ ಯೆಹೋವನ ಹೊರೆ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಹೊರೆ ಎಂದು ಹೇಳಿದ ಕಾರಣ ಇಗೋ,


ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು