Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರವಾದಿಗಳ ವಿಷಯ : ನನ್ನ ಗುಂಡಿಗೆ ಒಡೆದುಹೋಗಿದೆ ನನ್ನೆಲುಬುಗಳು ನಡುನಡುಗುತ್ತಿವೆ ಸರ್ವೇಶ್ವರನಿಗೆ, ಆತನ ಪವಿತ್ರವಾಕ್ಯಕ್ಕೆ ಪರವಶನಾದ ನಾನು ಅಮಲೇರಿದಂತವನಾದೆ. ಹೌದು, ಮದ್ಯಪಾನಕ್ಕೆ ಸೋತ ಮನುಷ್ಯನಂತಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪ್ರವಾದಿಗಳ ವಿಷಯ. ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪ್ರವಾದಿಗಳಿಗೊಂದು ಸಂದೇಶ. ನಾನು ಬಹಳ ದುಃಖಿತನಾಗಿದ್ದೇನೆ. ನನ್ನ ಹೃದಯ ಒಡೆದುಹೋಗಿದೆ. ನನ್ನ ಎಲುಬುಗಳೆಲ್ಲಾ ನಡುಗುತ್ತಿವೆ. ನಾನು ಅಮಲೇರಿದವನಂತಿದ್ದೇನೆ. ಯೆಹೋವನೂ ಆತನ ಪರಿಶುದ್ಧ ನುಡಿಗಳೂ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪ್ರವಾದಿಗಳ ನಿಮಿತ್ತ: ನನ್ನ ಹೃದಯವು ನನ್ನಲ್ಲಿ ಮುರಿದಿದೆ. ನನ್ನ ಎಲುಬುಗಳೆಲ್ಲಾ ಕದಲುತ್ತವೆ. ಯೆಹೋವ ದೇವರ ನಿಮಿತ್ತವೂ, ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ, ಮತ್ತನಾದ ಮನುಷ್ಯನ ಹಾಗೆಯೂ, ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:9
21 ತಿಳಿವುಗಳ ಹೋಲಿಕೆ  

ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.


ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.


ಆತನು ನನಗೆ ಕಹಿಯಾದ ಆಹಾರವನ್ನು ಕೊಟ್ಟು, ವಿಷ ಪಾನವನ್ನು ಕುಡಿಯಮಾಡಿದ್ದಾನೆ.


ನೀನು ಹಿಂಸೆಗೊಳಗಾಗಿದ್ದಿ. ಕುಡಿದು ಅಮಲೇರಿದ್ದಿ. ಆದರೆ ದ್ರಾಕ್ಷಾರಸದಿಂದಲ್ಲ. ಆದುದರಿಂದ ಈಗ ಇದನ್ನು ಕೇಳು.


ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.


ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.


ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!


ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,


ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.


ಅಯ್ಯೋ, ನನ್ನ ದುಃಖಕ್ಕೆ ಕೊನೆಯಿಲ್ಲವೇ? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.


“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.


ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಚ್ಚಿಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, “ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯನ್ನು ಏನೆಂದು ಹೇಳಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು