Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 24:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಂದು ಪುಟ್ಟಿಯಲ್ಲಿ ಫಲ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು. ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಒಂದು ಬುಟ್ಟಿಯಲ್ಲಿ ಕಾಲಕ್ಕೆ ಮುಂಚೆ ಮಾಗಿದ್ದ ಹಣ್ಣುಗಳು ತುಂಬಿದ್ದವು. ಅವು ಅತ್ಯುತ್ತಮವಾದ ಅಂಜೂರದ ಹಣ್ಣುಗಳು. ಇನ್ನೊಂದು ಬುಟ್ಟಿಯಲ್ಲಿ ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಒಂದು ಪುಟ್ಟಿಯಲ್ಲಿ ಫಲಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು; ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಒಂದು ಬುಟ್ಟಿಯಲ್ಲಿ ಬಹಳ ಉತ್ತಮವಾದ ಅಂಜೂರಗಳಿದ್ದವು. ಆ ಅಂಜೂರಗಳು ಸುಗ್ಗಿಯಲ್ಲಿ ಬೇಗ ಮಾಗುವ ಹಣ್ಣುಗಳಂತಿದ್ದವು. ಆದರೆ ಇನ್ನೊಂದು ಬುಟ್ಟಿಯಲ್ಲಿ ತಿನ್ನಲಾಗದಷ್ಟು ಕೊಳೆತ ಅಂಜೂರಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಒಂದು ಬುಟ್ಟಿಯಲ್ಲಿ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳು ತುಂಬಿದ್ದವು. ಅವು ಅತ್ಯುತ್ತಮವಾದ ಅಂಜೂರದ ಹಣ್ಣುಗಳು. ಇನ್ನೊಂದು ಬುಟ್ಟಿಯಲ್ಲಿ ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 24:2
11 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.


ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?


ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ. ಮಾಗಿದ ಹಣ್ಣನ್ನು ಕೊಯ್ದು, ದ್ರಾಕ್ಷಿಯ ಹಕ್ಕಲನ್ನು ಆಯ್ದ ತೋಟದ ಸ್ಥಿತಿಗೆ ಬಂದಿದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.


“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.


ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.


“ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.


ನಿನ್ನ ಕೋಟೆಗಳೆಲ್ಲಾ ಮೊದಲು ಮಾಗಿದ ಹಣ್ಣುಳ್ಳ ಅಂಜೂರದ ಮರಗಳಂತಿರುವವು; ಆ ಮರಗಳನ್ನು ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವುದು.


ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು