ಯೆರೆಮೀಯ 24:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು. ಅಧ್ಯಾಯವನ್ನು ನೋಡಿ |