Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇವುಗಳಲ್ಲಿ ಸಂಭ್ರಮ ಸಡಗರಗಳ ಧ್ವನಿಯಾಗಲಿ. ವಧುವರರ ಸ್ವರವಾಗಲಿ ಏಳದಂತೆ ಮಾಡುವೆನು. ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ ವಧೂವರರ ಸ್ವರವನ್ನೂ ಬೀಸುವ ಕಲ್ಲಿನ ಸದ್ದನ್ನೂ ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಸ್ಥಳಗಳಲ್ಲಿ ನಾನು ಸಂತೋಷದ ಮತ್ತು ಸಂಭ್ರಮದ ಧ್ವನಿಗಳು ಕೇಳಿಬರದಂತೆ ಮಾಡುವೆನು. ವಧುವರರ ಸಂತೋಷದ ಧ್ವನಿಗಳು ಇನ್ನು ಮೇಲೆ ಕೇಳಿಬರುವದಿಲ್ಲ. ನಾನು ಬೀಸುವಕಲ್ಲಿನ ಸದ್ದನ್ನು ತೆಗೆದುಕೊಳ್ಳುವೆನು. ನಾನು ದೀಪದ ಬೆಳಕನ್ನು ತೆಗೆದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಈ ದೇಶಗಳಿಂದ ಸಂತೋಷದ ಶಬ್ದ ಮತ್ತು ಸಂತೋಷದ ಶಬ್ದವನ್ನು ಮಾತ್ರ ತೆಗೆದುಹಾಕುತ್ತೇನೆ, ವಧು ಅಥವಾ ವಧುವಿನ ಧ್ವನಿ ಅಲ್ಲಿ ಕೇಳಿಸುವುದಿಲ್ಲ, ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:10
14 ತಿಳಿವುಗಳ ಹೋಲಿಕೆ  

ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ.


ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿಯು ಇನ್ನು ಕೇಳಿಸದು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, ‘ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.’


ನಾನು ಅವಳ ಉಲ್ಲಾಸ, ಹಬ್ಬ, ಹುಣ್ಣಿಮೆ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.


ಆ ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.


ಜನರು ನಮ್ಮನ್ನು ಕೊಂದು ಸಂಹರಿಸಿ, ನಮ್ಮನ್ನು ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ನಾವು ಸೇವಕ ಸೇವಕಿಯರಾಗುವುದಕ್ಕೆ ಗುಲಾಮರಂತೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು” ಎಂದು ಉತ್ತರಕೊಟ್ಟಳು.


ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು.


ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ, ಈಜಾಡುವ ಬಟ್ಟೆಯ ನೆರಿಗೆಯನ್ನು ಹರಿದುಬಿಟ್ಟು, ಬೆತ್ತಲಾಗಿ ನದಿಗಳನ್ನು ಹಾದುಹೋಗು.


ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.


ನಮ್ಮ ಹೃದಯಾನಂದವು ತೀರಿತು, ನಮ್ಮ ನಾಟ್ಯ ನಲಿವುಗಳು ದುಃಖವಾಗಿ ಮಾರ್ಪಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು