ಯೆರೆಮೀಯ 25:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆ ಅವಧಿಯ ತರುವಾಯ ನಾನು ಬಾಬಿಲೋನನ್ನೂ ಅದರ ಅರಸನನ್ನೂ ದಂಡಿಸುವೆನು. ಅದರ ದ್ರೋಹದ ನಿಮಿತ್ತ ಆ ಬಾಬಿಲೋನಿನ ನಾಡನ್ನು ನಿತ್ಯ ವಿನಾಶಕ್ಕೆ ಗುರಿಪಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಎಪ್ಪತ್ತು ವರುಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ ಕಸ್ದೀಯರ ದೇಶವನ್ನೂ ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಆದರೆ ಎಪ್ಪತ್ತು ವರ್ಷಗಳಾದ ಮೇಲೆ ನಾನು ಬಾಬಿಲೋನಿನ ರಾಜನನ್ನೂ ಜನರನ್ನೂ ದಂಡಿಸುವೆನು.” ಇದು ಯೆಹೋವನಿಂದ ಬಂದ ಸಂದೇಶ. “ಅವರ ಪಾಪಗಳಿಗಾಗಿ ನಾನು ಬಾಬಿಲೋನ್ ದೇಶವನ್ನು ದಂಡಿಸುವೆನು. ನಾನು ಶಾಶ್ವತವಾಗಿ ಆ ಭೂಮಿಯನ್ನು ಮರುಭೂಮಿಯನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಎಪ್ಪತ್ತು ವರ್ಷ ತುಂಬಿದ ಮೇಲೆ ನಾನು ಬಾಬಿಲೋನಿನ ಅರಸನನ್ನೂ, ಆ ಜನಾಂಗವನ್ನೂ, ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು. ಅಧ್ಯಾಯವನ್ನು ನೋಡಿ |