Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅನೇಕ ರಾಷ್ಟ್ರಗಳೂ ಮಹಾರಾಜರೂ ಅವರನ್ನು ಗುಲಾಮರನ್ನಾಗಿಸಿಕೊಳ್ಳುವರು. ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿ ತೀರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅನೇಕ ಜನಾಂಗಗಳೂ ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹೌದು, ಬಾಬಿಲೋನಿನ ಜನರು ಅನೇಕ ಜನಾಂಗಗಳ ಮತ್ತು ಅನೇಕ ಮಹಾರಾಜರ ಸೇವೆ ಮಾಡಬೇಕಾಗುವುದು. ಅವರು ಮಾಡಲಿರುವ ದುಷ್ಕೃತ್ಯಗಳಿಗೆಲ್ಲ ತಕ್ಕ ಶಿಕ್ಷೆಯನ್ನು ನಾನು ಅವರಿಗೆ ಕೊಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅನೇಕ ಜನಾಂಗಗಳೂ, ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆಗಳ ಪ್ರಕಾರವೂ, ಅವರ ಕೈಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:14
17 ತಿಳಿವುಗಳ ಹೋಲಿಕೆ  

ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.


ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬಿಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.


ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.


ಆಹಾ, ಉತ್ತರ ದಿಕ್ಕಿನಿಂದ ಒಂದು ಜನಾಂಗವು ಬರುತ್ತೆ, ಮಹಾ ಜನವೂ, ಬಹು ಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ.


ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು.


ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!


ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.


ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.


ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.


ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ! ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ.


ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು