Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಸ್ರಯೇಲರ ದೇವರಾದ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು: “ಕೋಪವೆಂಬ ಮದ್ಯದಿಂದ ತುಂಬಿರುವ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊ. ಯಾವ ರಾಷ್ಟ್ರಗಳ ಬಳಿಗೆ ನಿನ್ನನ್ನು ಕಳಿಸುತ್ತೇನೋ ಆ ರಾಷ್ಟ್ರಗಳೆಲ್ಲ ಈ ಪಾತ್ರೆಯಿಂದ ಕುಡಿಯುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಸ್ರಾಯೇಲ್ಯರ ದೇವರಾದ ಯೆಹೋವನು ನನಗೆ - ರೋಷರೂಪಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲಿನ ದೇವರಾದ ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಈ ಪಾನಪಾತ್ರೆಯನ್ನು ನನ್ನ ಕೈಯಿಂದ ತೆಗೆದುಕೋ. ಇದು ಕೋಪದ ದ್ರಾಕ್ಷಾರಸ. ನಾನು ನಿನ್ನನ್ನು ವಿವಿಧ ಜನಾಂಗಗಳಲ್ಲಿಗೆ ಕಳುಹಿಸುತ್ತಿದ್ದೇನೆ. ಆ ಜನಾಂಗಗಳಿಗೆಲ್ಲಾ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಸ್ರಾಯೇಲಿನ ದೇವರಾದ ಯೆಹೋವ ದೇವರು ನನಗೆ ಹೀಗೆಂದರು: “ಈ ರೌದ್ರದ ದ್ರಾಕ್ಷಾರಸದ ಪಾತ್ರೆಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತೆಗೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:15
27 ತಿಳಿವುಗಳ ಹೋಲಿಕೆ  

ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನಾದ ದೇವರ ರೌದ್ರರಸವನ್ನು ಪಾನಮಾಡಲಿ.


ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.


ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು.


ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.


ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.


ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು. ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು, ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.”


“ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.


ಅವನು ಬಂದು ಐಗುಪ್ತ ದೇಶವನ್ನು ಹೊಡೆಯುವನು. ಮರಣಕ್ಕೆ ನೇಮಕವಾದವರು ಮರಣಕ್ಕೆ, ಸೆರೆಗೆ ನೇಮಕವಾದವರು ಸೆರೆಗೆ, ಖಡ್ಗಕ್ಕೆ ನೇಮಕವಾದವರು ಖಡ್ಗಕ್ಕೆ ಗುರಿಯಾಗುವರು.


ಯೆಹೋವನು ಜನಾಂಗಗಳ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.


“ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.


ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಉದ್ದವೂ, ಅಗಲವೂ, ಬಹಳ ತುಂಬುವ, ನಿನ್ನ ಅಕ್ಕನ ಪಾತ್ರೆಯಲ್ಲಿ ನೀನು ಕುಡಿದು, ಹಾಸ್ಯಕ್ಕೂ, ಕುಚೋದ್ಯಕ್ಕೂ ಗುರಿಯಾಗುವಿ.


ಸಮಾರ್ಯಳೆಂಬ ನಿನ್ನ ಅಕ್ಕನು ಕುಡಿದ ಪಾತ್ರೆಯಿಂದಲೇ ವಿಸ್ಮಯವೂ, ನಾಶವೂ ಆಗುವುದು. ನೀನು ಅಮಲಿನಿಂದಲೂ, ದುಃಖದಿಂದಲೂ ತುಂಬಿರುವೆ.


ಹಾಳು ಬಿದ್ದಿರುವ ದೇಶಗಳ ಮಧ್ಯದಲ್ಲಿ ಐಗುಪ್ತ ದೇಶವನ್ನೂ ಹಾಳುಮಾಡುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲ್ವತ್ತು ವರ್ಷ ಹಾಗೆಯೇ ಇರುವುದು; ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ, ದೇಶದೇಶಗಳಲ್ಲಿ ಚದುರಿಸುವೆನು.’”


ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.’


ನನ್ನ ಜನರೇ, ನೀವು ನನ್ನ ಪವಿತ್ರಪರ್ವತದಲ್ಲಿ ನನ್ನ ದಂಡನೆಯ ಕಹಿ ಪಾನಮಾಡಿದ್ದಿರಿ. ನಿಮ್ಮ ಸುತ್ತಲಿರುವ ಸಕಲ ಜನಾಂಗಗಳೂ ಹೀಗೆ ನಿತ್ಯವಾಗಿ ಪಾನಮಾಡುವವು. ಹೌದು ಆ ರಾಜ್ಯಗಳು ಹೀಗೆ ಕುಡಿದು ಕಬಳಿಸಿ ಅಸ್ತಿತ್ವದಲ್ಲಿ ಇಲ್ಲದಂತೆ ಆಗುವವು.


ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು, ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು.


ನಾನಾದರೋ ಸದಾ ವರ್ಣಿಸುವವನಾಗಿ, ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.


ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.


ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ.


“ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.


ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು